ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನೊಂದವರ ಸಭೆಯನ್ನು ಮಾಡಲಾಗಿದ್ದು, ಇದರಲ್ಲಿ ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿನ ಕೊಲೆ, ಅತ್ಯಾಚಾರ, ಪೋಕ್ಸೋ ಇತ್ಯಾದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರರಿಗೆ ಹಾಗೂ ಕುಟುಂಬಸ್ಥರ ಆಪ್ತ ಸಮಾಲೋಚನೆಗಾಗಿ ನೊಂದವರ ಸಭೆ ನಡೆಸಿದ್ದು, ಇದರಲ್ಲಿ ಕೋರ್ಟ್ ಆವರಣದಲ್ಲಿಯೇ ಚಂದ್ರಶೇಖರ ಗುರೂಜಿ ಕೊಲೆಯ ಆರೋಪಿಗಳು ಜೀವ ಬೆದರಿಕೆ ಹಾಕಿರುವ ಬಗ್ಗೆ ಮಾಹಿತಿ ಬಂದಿದ್ದು, ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ ಎಂದರು.

ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳನ್ನು ಕೋರ್ಟ್ ಹಾಜರು ಪಡಿಸುವ ಜೊತೆಗೆ ಇಬ್ಬರು ಕೊಲೆ ಆರೋಪಿಗಳು ಮಾತ್ರವೇ ಈ ಜೀವ ಬೆದರಿಕೆ ಹಾಕಿದ್ದಾರೋ ಅಥವಾ ಬೇರೆ ಯಾರಾದರೂ ಈ ಪ್ರಕರಣದಲ್ಲಿ ಇದ್ದಾರೋ ಎಂಬುವುದರ ಬಗ್ಗೆ ಸೂಕ್ತ ತನಿಖೆ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು.

Leave a Reply

Your email address will not be published. Required fields are marked *