ಹುಬ್ಬಳ್ಳಿ: ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಘಟನೆ ಪೂರ್ವ ನಿಯೋಜಿತ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ರಾಷ್ಟ್ರದ್ರೋಹಿ ಚಟುವಟಿಕೆಗಳು ನಾಗಮಂಗಲದಲ್ಲಿ ನಡೆದಿದೆ. ಹಿಂದೂಗಳು ಸಾಮೂಹಿಕವಾಗಿ ಗಣೇಶ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಮಸೀದಿ ಮುಂದೆ ಡೋಳು ಬಾರಿಸಲಾಗಿದೆ ಎಂಬ ಕಾರಣಕ್ಕೆ ಶಾಂತಿಯುತವಾಗಿ ನಡೆಯುತ್ತಿದ್ದ ಮೆರವಣಿಗೆ ಮೇಲೆ ಗೂಂಡಾಗಿರಿ ನಡೆಸಲಾಗಿದೆ. ಪೆಟ್ರೋಲ್ ಬಾಂಬ್, ಕಲ್ಲು ತೂರಾಟ ಮಾಡಲಾಗಿದೆ. ಹಿಂದೂಗಳ ಮೇಲೆ ಆಕ್ರಮಣ ಮಾಡಲಾಗಿದೆ ಎಂದರು.

ಇತ್ತಿಚೆಗೆ ಕಾಂಗ್ರೆಸ್ ನಾಯಕ ಐವಾನ್ ಡಿಸೋಜಾ ಬಾಂಗ್ಲಾ ಮಾದರಿಯಲ್ಲಿ ರಾಜ್ಯದಲ್ಲಿ ಗಲಭೆ ನಡೆಯುತ್ತದೆ ಎಂಬ ಹೇಳಿಕೆಯನ್ನು ನೀಡಿದ್ದರು. ಅದರಂತೆ ಪಾಕಿಸ್ತಾನ ಮನಸ್ಥಿತಿಯ ಮುಸ್ಲಿಮರು ಹಿಂದೂಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಕಿಡಿಕಾರಿದರು.

ಗೃಹ ಸಚಿವರು ನಾಗಮಂಗಲದಲ್ಲಿ ನಡೆದ ಗಲಾಟೆ ಸಣ್ಣದ್ದು ಎಂಬ ಹೇಳಿಕೆ ಕೊಟ್ಟಿದ್ದಾರೆ. ಆದರೆ ಗೃಹ ಸಚಿವರು ರಾಷ್ಟ್ರದ್ರೋಹಿ ಮುಸ್ಲಿಂ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳತ್ತೇವೆ ಎಂಬ ಹೇಳಿಕೆ ಕೊಡಬೇಕಿತ್ತು. ಅದು ಬಿಟ್ಟು ಅಮಾಯಕ ಜನರನ್ನು ಭಯಬೀಳುವಂತೆ ಮಾಡಿದ್ದಾರೆ ಎಂದರು‌.

ಮಸೀದಿ ಇರುವಲ್ಲಿ ಗಣಪತಿ ಹೋಗಬಾರದು ಎಂಬ ನಿಯಮವಿಲ್ಲ. ಮೆರವಣಿಗೆ ಮಾಡಬೇಕಾದರೇ ಪೂರ್ವದಲ್ಲಿ ಅನುಮತಿ ಪಡೆಯಲಾಗಿರುತ್ತದೆ. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಇವರ ರಕ್ಷಣೆ ಮಾಡುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರ ಹಿಂದಿನಿಂದಲೂ ಓಲೈಕೆ ರಾಜಕಾರಣ ಮಾಡುತ್ತಲೇ ಬರುತ್ತಿದೆ. ಅದು ಮುಂದುವರೆದಿದೆ ಅಷ್ಟೇ. ಯಾರು ಹಿಂದೂಗಳ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಅಂತಹ ಮುಸ್ಲಿಂ ಗೂಂಡಾಗಳನ್ನು ಬಂಧಿಸುವ ಕೆಲಸ ನಡೆಯಬೇಕೆಂದು ಈಶ್ವರಪ್ಪ ಆಗ್ರಹಿಸಿದರು.

ಪುನಃ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ತವರು ಮನೆಗೆ ಹೋಗದೇ ಇರುವ ಹೆಣ್ಣು ಮಗಳು ಯಾರಾದರೂ ಇದ್ದಾರಾ? ಹಾಗೇಯೇ ಪಕ್ಷದಲ್ಲಿನ ಸಮಸ್ಯೆಗಳು ಸರಿಯಾದ ಮೇಲೆ ಪುನಃ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ. ಆದರೆ ಕಾದು ನೋಡೋಣಾ ಎಂದು ತಿಳಿಸಿದರು.

ಸಿಎಂ ಕುರ್ಚಿ ವಿಚಾರಕ್ಕೆ ಸಂಬಂಧಿಸಿದಂತೆ
ದೊಡ್ಡ ಲಿಸ್ಟ್ ಬೆಳೆದಿದೆ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ಅವರು ಬಿಟ್ಟು ಕೊಡೋಲ್ಲ. ಕಾಂಗ್ರೆಸ್ ನಾಯಕರಲ್ಲಿ ಹೊರಗೆ ಬೆಂಬಲ ಬಂದರೆ ಒಳಗೆ ಹಂಬಲಯಿದೆ. ಆರ್. ವಿ ಯಿಂದ ಹಿಡಿದು ಸಿಎಂ ಆಕಾಂಕ್ಷಿಗಳಾಗಿದ್ದಾರೆ. ಕೇಂದ್ರ ನಾಯಕರ ಹೇಳಿಕೆಗೆ ಇಲ್ಲಿ ಬೆಲೆಯಿಲ್ಲದಂತಾಗಿದೆ. ಮುಡಾ-ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪಿತಸ್ಥರೆಂದು ಕೋರ್ಟ್ ಪ್ರಕಟಿಸಿದಾಗ ರಾಜೀನಾಮೆ ಕೊಡಲೇಬೇಕು ಎಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *