ಮಾಗಡಿ: ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ  ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅವರು ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ ಎಂದರು. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದು ಪ್ರಾಧಿಕಾರವನ್ನೂ ರಚನೆ ಮಾಡಲಾಯಿತು.  ಇದರ ಉದ್ದೇಶ ಕೆಂಪೇಗೌಡರನ್ನು ಎಲ್ಲರೂ ಸ್ಮರಿಸಬೇಕು ಎನ್ನುವುದಾಗಿತ್ತು.

ಒಕ್ಕಲಿಗರ ನಾಯಕರು ಎಂದು ಹೇಳಿಕೊಳ್ಳುವವರು ಇದನ್ನು ಮಾಡಲಿಲ್ಲ.  ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದ್ದು, ಅವರ ಜಯಂತ್ಯೋತ್ಸವವನ್ನು ಆಚರಿಸುವುದು ಸರ್ಕಾರದ ಕರ್ತವ್ಯ ಎಂದು ಭಾವಿಸಿ 2016-17 ರಲ್ಲಿ ಆಚರಣೆಗೆ ತಂದಿದ್ದ ನಮ್ಮ ಸರ್ಕಾರ ಎಂದರು. 

Leave a Reply

Your email address will not be published. Required fields are marked *