ಶಿಡ್ಲಘಟ್ಟ: ತಾಲ್ಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ಪ್ರೇಮಿಗಳಿಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.‌

ಶಾಲೆಗೆ ಹೋಗಿ ಅಕ್ಷರ ಕಲಿಯುತ್ತಿದ್ದ ಹುಡಗಿ, ಪ್ರೀತಿ ಪ್ರೇಮದಲ್ಲಿ ಬಿದ್ದು ಪ್ರಿಯಕರನ ಜೊತೆಯಲ್ಲೆ ಸಾವಿಗೆ ಶರಣಾಗಿದ್ದಾಳೆ. ಬೆಳ್ಳಂ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಶಾಲಾ ಸಮವಸ್ತ್ರದಲ್ಲೆ ಹುಡಗಿಯ ಮೃತ ದೇಹ ನೇಣು ಬಿಗಿದ ಅನುಮಾನ್ಪದ ಸ್ಥಿತಿಯಲ್ಲಿ ಮರಕ್ಕೆ ನೇತಾಡುತ್ತಿರುವುದು ಕಂಡುಬಂದಿದೆ. ಬ್ಯಾಗ್ ಸಹ ಸ್ಥಳದಲ್ಲೆ ಬಿದ್ದಿದೆ. ಅಪ್ರಾಪ್ತ ವಯಸ್ಸಿನವರಾಗಿದ್ದಾರೆ ಎನ್ನಲಾಗಿದೆ. ಇಬ್ಬರ ನಡುವೆ ಪ್ರೀತಿ ಪ್ರೇಮ ಶುರುವಾಗಿ ಪೋಷಕರು, ಕಾನೂನಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು, ಹಿರಿಯ ಪೊಲೀಸ್ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅನುಮಾನಸ್ಪದ ಸ್ಥಿತಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತ ದೇಹಗಳು ಪತ್ತೆಯಾಗಿವೆ. ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಾಗಿದೆ.

ಹುಡುಗ ಬಟ್ಲಹಳ್ಳಿ ಪೊಲೀಸ್ ಠಾಣೆ ಸರಹದ್ದಿನ ಇರಗಂಪಲ್ಲಿ ಎಂದು ಹೇಳಲಾಗುತ್ತಿದೆ. ಹುಡುಗಿಯ ವಿಳಾಸ ಇನ್ನೂ ಪತ್ತೆ ಆಗಿರುವುದಿಲ್ಲ. ಪೊಲೀಸರು ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *