ಮಾಗಡಿ (ರಾಮನಗರ ಜಿಲ್ಲೆ): ಹಾಲಿನ ದರದಲ್ಲಿ ಮತ್ತೊಮ್ಮೆ ಏರಿಕೆಯಾಗುವ ಸೂಚನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ.
”ಹೈನುಗಾರರಿಗೆ ಲಾಭವಾಗುತ್ತಿಲ್ಲ, ಹಾಲಿನ ದರವನ್ನು ಲೀಟರ್ಗೆ 5 ರೂ. ಹೆಚ್ಚಿಸುವಂತೆ ಹಲವು ಕಡೆಗಳಿಂದ ಬೇಡಿಕೆ ಬಂದಿದ್ದು, ರೈತರ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಕುರಿತು ಶೀಘ್ರವೇ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ’ ಎಂದು ಸಿದ್ದರಾಮಯ್ಯ ಹೇಳಿದರು.
ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಶುಕ್ರವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.
ಸಹಕಾರ ಸಂಘಗಳಿಗೆ ಪ್ರತಿ ಲೀಟರ್ ಹಾಲಿಗೆ 20 ಪೈಸೆ ನೀಡಬೇಕು ಎಂಬ ಬೇಡಿಕೆಯೂ ಇದೆ ಎಂದು ಸಿದ್ದರಾಮಯ್ಯ ಹೇಳಿದರು.
ಈ ಬೇಡಿಕೆಯ ಬಗ್ಗೆಯೂ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.