ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಿರ್ಮಿಸಿದ ಮಾನವ ಸರಪಳಿ ಮೇಲೆ ಹೆಜ್ಜೇನು ಹುಳುಗಳು ದಾಳಿ ಮಾಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದಲ್ಲಿ ನಡೆದಿದೆ.
ಘಟನೆ ಇಂದಾಗಿ ಮಾನವ ಸರಪಳಿ ನಿರ್ಮಿಸಿದ ಸಾರ್ವಜನಿಕರು ತಮ್ಮ ರಕ್ಷಣೆಗಾಗಿ ದಿಕ್ಕಾಪಾಲಾಗಿ ಓಡಿದ ಪ್ರಸಂಗ ನಡೆಯಿತು.
ಶಿಗ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಸರಸ್ವತಿ ಗುಡಿಸಾಗರ ಹಾಗೂ ಸರೋಜಾ ದಿಂಡೂರು ಶಿಕ್ಷಕಿಯರ ಮೇಲೆ ಹೆಜ್ಜೇನು ಹುಳುಗಳು ದಾಳಿ ಮಾಡಿದ್ದು ಮುಖ, ತಲೆ, ಕೈಗೆ, ಕಚ್ಚಿದಾಗ ಶಿಕ್ಷಕಿಯರು ಅಸ್ವಸ್ಥಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಅಸ್ವಸ್ಥಗೊಂಡ ಶಿಕ್ಷಕಿಯರನ್ನು ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಅವರು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮೂಲಕ ಸ್ವತಃ ತಾವೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.