ಬಡ ಶಾಲಾ ವಿದ್ಯಾರ್ಥಿಗಳನ್ನು ಗುರುತಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ಸೇವಾ ಸಂಘದವರು ಬ್ಯಾಗ್ ವಿತರಿಸುತ್ತಿರುವುದು ಶ್ಲಾಘನೀಯ ಎಂದು ಕಾಂಗ್ರೆಸ್ ಮುಖಂಡ ಶುಭಾಶ್ಚಂದ್ರನಾಯಕ ತಿಳಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸೋನಿಯಾ ಗಾಂಧಿ ನಗರದ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ಸೇವಾ ಸಂಘದವರು ಹಮ್ಮಿಕೊಂಡಿದ್ದ ಬ್ಯಾಗ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಾವು ಇಂದು ನೋಡಿದಾಗ ಸರಕಾರಿ ಶಾಲೆಯ ವಿದ್ಯಾರ್ಥಿಗಳೆ ಹೆಚ್ಚು ಸಾಧನೆ ಮಾಡಿದ್ದಾರೆ.ಹೀಗಾಗಿ ವಿದ್ಯಾರ್ಥಿಗಳು ಯಾವುದಕ್ಕೂ ಹೆದರದೆ ಶಿಕ್ಷಕರ ಸಲಹೆಯಿಂದ ಮುನ್ನಡೆಯಬೇಕು ಎಂದರು.
ಕಾಂಗ್ರೆಸ್ ಮುಖಂಡ ಖಾಲಿದ್ ಗುರು ಮಾತನಾಡಿ, ಸರಕಾರ ಕೊಡಬೇಕಾದ ಬ್ಯಾಗ್ ಗಳನ್ನು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ಸೇವಾಸಂಘದವರು ನೀಡಿರುವುದು ಮೆಚ್ಚುವಂತದ್ದು ಎಂದರು.