ಮಡಿಕೇರಿ : ಜಮ್ಮು-ಕಾಶ್ಮೀರ ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ದಿವಿನ್ (28) ನೆನ್ನೆ ರಾತ್ರಿ ಹುತಾತ್ಮರಾಗಿದ್ದಾರೆ. ಅವರ ಪಾರ್ಥಿವ ಶರೀರ ಹೂಟ್ಟೂರು ತಲುಪಿದೆ.

ಕುಶಾಲನಗದಲ್ಲಿ ದಿವಿನ್ ವಿದ್ಯಾಭ್ಯಾಸ ಮಾಡಿದ್ದ ಜಿಎಂಪಿ ಶಾಲಾ ಮೈದಾನದಲ್ಲಿ ಕೆಲ ಗಂಟೆಗಳ ಕಾಲ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ. ಈ ಬಳಿಕ ಕುಶಾಲನಗರದಿಂದ ನೇರವಾಗಿ ಆಲೂರು ಸಿದ್ದಾಪುರಕ್ಕೆ ಪಾರ್ಥಿವ ಶರೀರ ಕೊಂಡೊಯ್ಯಲಾಗುತ್ತದೆ. ದಿವಿನ್ ಅವರ ತೋಟದಲ್ಲಿರುವ ಅವರ ತಂದೆ ಸಮಾಧಿ ಪಕ್ಕದಲ್ಲಿ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ಇಂದು ನೆರವೇರಲಿದೆ.

ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಕೊಡಗಿನ ಯೋಧ ಗಂಭೀರ ಗಾಯಗೊಂಡಿದ್ದರು. ಈ ದುರಂತದಲ್ಲಿ ಕರ್ನಾಟದ ಮೂವರು ಸೈನಿಕರು ಹುತಾತ್ಮರಾದ್ದರು ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *