ಬೆಂಗಳೂರು : ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು 8 ಅಧಿಕಾರಿಗಳ ವಿರುದ್ಧ ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಅಧಿಕಾರಿಗಳ ಕಚೇರಿ, ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕೆಲ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ತೋಟದ ಮನೆಗಳ ಮೇಲೂ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಠರಿಗೆ ಬಿಸಿ ಮುಟ್ಟಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಹನಂಮತರಾಯ್, ಡಿವೈಎಸ್ಪಿ ವಿಜಯ್ ಬಿರಾದಾರ್, ಪಿಎಸ್ಐ ಎಸ್ ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ದಾಳಿ ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೆಲೆ, ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್ಎನ್ ಉಮೇಶ್ ನಿವಾಸದ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ.
ಯಾರ ಮನೆ ಮೇಲೆ ದಾಳಿ :
- ಬೆಂಗಳೂರು – ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ
2 ಚಿಕ್ಕಮಗಳೂರು – ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ.ಉಮೇಶ್ - ಬೀದರ್ – ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ರವೀಂದ್ರ,
- ಬೆಳಗಾವಿ – ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್
- ತುಮಕೂರು – ನಿವೃತ್ತ ಆರ್ಟಿಒ ಅಧಿಕಾರಿ ಎಸ್.ರಾಜು
- ಬಳ್ಳಾರಿ – ದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಲೋಕೇಶ್
- ರಾಯಚೂರು – ಬೆಸ್ಕಾಂ ಜೆಇ ಹುಲಿರಾಜ್
- ಗದಗ-ಬೆಟಗೇರಿ ನಗರಸಭೆ ಎಂಜಿನಿಯರ್ಹುಚ್ಚೇಶ್ ಬಂಡಿವಡ್ಡರ್