ಕೋಲಾರ : ತಮಿಳುನಾಡಿನ ರಾಣಿಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರ ಮೂಲದ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ ಕ್ಯಾಂಟರ್​ನಲ್ಲಿದ್ದ ನಾಲ್ವರು ಮತ್ತು ಕೆಎಸ್​ಆರ್​ಟಿಸಿ ಬಸ್​ ಚಾಲಕ ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಓರ್ವ ಮಹಿಳೆಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಮೃತಪಟ್ಟವರಾಗಿದ್ದಾರೆ. ನಲ್ಲೂರು ಗ್ರಾಮದ ಸರಸ್ವತಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆ, ರತ್ನಗಿರಿ ಮೆಡಿಕಲ್ ಕಾಲೇಜಿನಲ್ಲಿ ದಾಖಲಿಸಲಾಗಿದೆ.

ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಭಕ್ತರು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಹೋಗಿ ವಾಪಸಾಗುತ್ತಿದ್ದರು. ಕ್ಯಾಂಟರ್ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *