ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಬಸ್​ ಪ್ರಯಾಣ​ ದರ ಹೆಚ್ಚಳ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ, ರಾಜ್ಯ ಸರ್ಕಾರ ಇದೀಗ ಮದ್ಯ ಪ್ರಿಯರಿಗೆ ಶಾಕ್​ ನೀಡಿದ್ದು, ಒಂದು ವರ್ಷದಲ್ಲಿ 3ನೇ ಬಾರಿಗೆ ಬಿಯರ್ ಬೆಲೆ ಹೆಚ್ಚಳ ಮಾಡಲು ಮುಂದಾಗಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಜೆಟ್​ಗೂ ಮುನ್ನವೇ ಬಿಯರ್​ ದರ ಏರಿಕೆ ಮಾಡಲು ನಿರ್ಧರಿಸಿದೆ. ಜ.20ರಿಂದ ಬಿಯರ್ ಬೆಲೆ ಕನಿಷ್ಠ 15 ರೂಪಾಯಿಯಿಂದ 50 ರೂಪಾಯಿವರೆಗೂ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು, ಬಿಯರ್ ಬೆಲೆ ಏರಿಕೆ ಕುರಿತಂತೆ ಚರ್ಚೆಗಳು ನಡೆಯುತ್ತಿವೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ. ಬಿಯರ್ ಬೆಲೆ ಹೊರತುಪಡಿಸಿ ಬೇರೆ ಯಾವುದೇ ಮದ್ಯದ ಬೆಲೆಯ ಹೆಚ್ಚಳದ ಬಗ್ಗೆ ಚಿಂತನೆ ಇಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಇನ್ನು ಚರ್ಚಿಸಬೇಕಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *