ಬೆಂಗಳೂರು : ಡಿಕೆ ಸುರೇಶ್ ತಂಗಿ ಹೆಸರಿನಲ್ಲಿ ಐಶ್ವರ್ಯಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಉಡುಗೊರೆಯಾಗಿ ಐಶ್ವರ್ಯ ನೀಡಿದ್ದರು ಎನ್ನಲಾದ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಐಶ್ವರ್ಯ ಗೌಡ ಹಾಗೂ ವಿನಯ್ ಕುಲಕರ್ಣಿ ನಡುವೆ ವ್ಯವಹಾರಿಕ ಸಂಬಂಧ ಇದೆ ಎಂಬುದಕ್ಕೆ ಸಾಕ್ಷಿಯಾಗಿದ್ದ, ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಹಿಂದೆ ಐಶ್ವರ್ಯಗೌಡ ಬಳಿ ಮೂರು ಐಷಾರಾಮಿ ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದರು. ನಂತರ ಐಶ್ವರ್ಯ ಪತಿ ಹರೀಶ್ ಹೆಸರಿನಲ್ಲಿದ್ದ ಆಡಿ, ಬಿಎಂಡಬ್ಲ್ಯೂ ಹಾಗೂ ಫಾರ್ಚುನರ್ ಕಾರುಗಳನ್ನು ಸೀಜ್ ಮಾಡಲಾಗಿತ್ತು. ಇದೀಗ ಮತ್ತೊಂದು ಕಾರನ್ನು ಸೀಜ್ ಮಾಡಿ ವಶಪಡಿಸಿಕೊಂಡಿದ್ದಾರೆ.
ಕೆಎ03 ಎನ್‌ಎನ್ 8181 ಸಂಖ್ಯೆಯ 60 ಲಕ್ಷ ಮೌಲ್ಯದ ಮರ್ಸಿಡಿಸ್ ಬೆಂಜ್ ಕಾರನ್ನು ಸೀಜ್ ಮಾಡಲಾಗಿದೆ. ವಂಚನೆ ಮಾಡಿದ್ದ ಹಣದಿಂದ ಕಾರು ಖರೀದಿಸಿದ್ದ ಐಶ್ವರ್ಯ ಗೌಡ, ಅದನ್ನು ಗಿಫ್ಟ್ ರೂಪದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನೀಡಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ.