ಚಿಕ್ಕಮಗಳೂರು : ಶೃಂಗೇರಿ ಶಾರದಾ ಪೀಠದ ಭಾರತೀತೀರ್ಥ ಸ್ವಾಮೀಜೀಯವರ 50ನೇ ವರ್ಷದ ಸನ್ಯಾಸ ಸ್ವೀಕಾರ ಅಂಗವಾಗಿ ಏರ್ಪಡಿಸಲಾಗಿರುವ ಸುವರ್ಣ ಭಾರತೀ, ಸುವರ್ಣ ಸ್ತೋತ್ರ ತ್ರಿವೇಣಿ ಕಾರ್ಯಕ್ರಮದಲ್ಲಿ ಭಾಗಿಯಾದರು.

ಡಿಸಿಎಂ ಡಿಕೆ ಶಿವಕುಮಾರ್, ಇಲ್ಲಿನ ಮೆಣಸೆ ಹೆಲಿಪ್ಯಾಡ್ ನಲ್ಲಿ ಮಾತಾಡುವಾಗ ರಾಜಕೀಯದ ಬದಲು ಧಾರ್ಮಿಕತೆ ಮತ್ತು ಆಧ್ಯಾತ್ಮಕ್ಕೆ ಹೆಚ್ಚು ಒತ್ತು ನೀಡಿದರು. 50 ವರ್ಷಗಳ ಹಿಂದೆ ಸ್ವಾಮೀಜಿವರು ಪ್ರಾಪಂಚಿಕ ವೈಭೋಗಗಳನ್ನು ತ್ಯಜಿಸಿ ಸನ್ಯಾಸ ಸ್ವೀಕರಿಸಿದ್ದರ ಬಗ್ಗೆ ಮಾತಾಡಿದ ಶಿವಕುಮಾರ್, ಧರ್ಮ ಕಾಪಾಡುವವರನ್ನು ಧರ್ಮವೇ ರಕ್ಷಿಸುತ್ತದೆ, ಧರ್ಮೋ ರಕ್ಷತಿ ರಕ್ಷಿತಃ ಎಂದರು.

ಶಾರದಾ ಪೀಠದ ಮೇಲೆ ತನಗೆ ವಿಶೇಷವಾದ ನಂಬಿಕೆ ಇದೆ, ಸರ್ಕಾರದ ಪ್ರತಿನಿಧಿ ಹಾಗೂ ವೈಯಕ್ತಿಕವಾಗಿ ಇಲ್ಲಿಗೆ ಬಂದಿದ್ದೇನೆ, ತಾನು ಧರ್ಮದ ಮೇಲೆ ನಂಬಿಕೆ ಇಟ್ಟವನು ಪ್ರತಿದಿನ ಪೂಜೆ ಮಾಡ್ತೇನೆ ಎಂದು ಹೇಳಿದರು.

Leave a Reply

Your email address will not be published. Required fields are marked *