ಬೆಂಗಳೂರು : ದಯಾಮರಣಕ್ಕೆ ಕೋರಿ ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಶನ್‌ನವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ, ವೆಂಡರ್ಸ್‌ಗಳ ಬಾಕಿ ಬಿಲ್ ಪಾವತಿ ಮಾಡುತ್ತಿಲ್ಲ. ಒಂದು ವರ್ಷದಿಂದ ತನಿಖೆಯ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ. 400 ರಿಂದ 500 ವೆಂಡರ್ಸ್‌ಗಳಿಗೆ ಬಿಲ್ ಪಾವತಿ ಬಾಕಿ ಇಡಲಾಗಿದೆ. ನಮ್ಮ ಕಷ್ಟವನ್ನು ಐಟಿ, ಬಿಟಿ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಆಲಿಸುತ್ತಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಯಾರಾದರೂ ವೆಂಡರ್ಸ್ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ನಾಲ್ವರು ಕಾರಣ ಎಂದು ಪ್ರಿಯಾಂಕ್ ಖರ್ಗೆ, ಶರತ್ ಬಚ್ಚೇಗೌಡ, ಕಿಯೋನಿಕ್ಸ್ ಸಿಇಓ ಪವನ್ ಕುಮಾರ್, ಕಿಯೋನಿಕ್ಸ್ ಹಣಕಾಸು ವಿಭಾಗದ ನಿಶ್ಚಿತ್ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇಲ್ಲದಿದ್ದರೆ ಸಾವಿರಾರು ಮಂದಿ ವೆಂಡರ್ಸ್‌ಗಳಿಗೆ ದಯಾಮರಣ ನೀಡಿ ಎಂದು ಪತ್ರ ಬರೆಯಲಾಗಿದೆ.

Leave a Reply

Your email address will not be published. Required fields are marked *