ಶಬರಿಮಲೆ : ಸಂಕ್ರಾಂತಿ ಹಬ್ಬದಂದು ಜ್ಯೋತಿ ರೂಪದಲ್ಲಿ ಅಯ್ಯಪ್ಪ ಭಕ್ತರಿಗೆ ದರ್ಶನ ನೀಡಿದ್ದಾನೆ. ನೆನ್ನೆ ಸಂಜೆ 6:44ಕ್ಕೆ ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು. ಈ ವೇಳೆ ಅಯ್ಯಪ್ಪನ ಭಕ್ತಿಗೀತೆ ಗುಣಗಾನ ಮಾಡುತ್ತಾ ಲಕ್ಷಾಂತರ ಭಕ್ತರು ಮಕರ ಜ್ಯೋತಿ ದರ್ಶನ ಪಡೆದಿದ್ದಾರೆ.

ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆಗಳು ನಡೆದವು. ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಅಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಹಾಮಂಗಳಾರತಿ ವೇಳೆಗೆ ಜ್ಯೋತಿರೂಪದಲ್ಲಿ ಅಯ್ಯಪ್ಪ ಭಕ್ತರಿಗೆ ಕಾಣಿಸಿ ದರ್ಶನಕೊಟ್ಟಿದ್ದಾನೆ.

ಭಕ್ತ ಸಮೂಹದ ನಿರ್ವಹಣೆ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯ ಮತ್ತು ಅದರ ಸುತ್ತಮುತ್ತ ಪೊಲೀಸ್ ಬಿಗ್ಗಿ ಭದ್ರತೆ ಕಲ್ಪಿಸಲಾಗಿತ್ತು.

Leave a Reply

Your email address will not be published. Required fields are marked *