ಮೈಸೂರು : ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್ ಡೇ ಆಗಿದ್ದು, ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ಮಹತ್ತರವಾದ ಆದೇಶ ಹೊರ ಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಧಾರವಾಡ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಇಂದು ಬಹುತೇಕ ಈ ಪ್ರಕರಣದ ಆದೇಶ ನೀಡುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಮಾತನಾಡಿರು ದೂರುದಾರ ಸ್ನೇಹಮಯಿ ಕೃಷ್ಣ, ಇವತ್ತು ನಿಶ್ಚಿತವಾಗಿಯೂ ಪ್ರಕರಣದ ತನಿಖೆ ಸಿಬಿಐಗೆ ಹೋಗುತ್ತದೆ. ಆದೇಶದ ನಂತರ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ನೀಡುವ ಬೆಳವಣಿಗೆಯೂ ನಡೆಯುತ್ತದೆ ಎಂದಿದ್ದಾರೆ.

ಮುಡಾದಿಂದ 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದ ಆರೋಪ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮೇಲಿದೆ. ಈ ಪ್ರಕರಣ ಸಂಬಂಧ ಲೋಕಾಯುಕ್ತ ಮತ್ತು ಇಡಿ ಅಧಿಕಾರಿಗಳು ಸಿಎಂ ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ. ಕೇಸನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್‌ ಮೊರೆ ಹೋಗಿದ್ದರು ಹಾಗೂ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

Leave a Reply

Your email address will not be published. Required fields are marked *