ಬೆಂಗಳೂರು : ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರನನ್ನು ಬಂಧಿಸಲಾಗಿದೆ.

ನಿಷೇಧಿತ ಪಿಎಫ್ಐ ಸದಸ್ಯನಾಗಿದ್ದ, ಅತೀಕ್ ಅಹ್ಮದ್ ಎಂಬಾತನನ್ನು ಈ ಪ್ರಕರಣದಲ್ಲಿ ಬಂಧನ ಮಾಡಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಕೇಸ್​​ಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 21ನೇ ಆರೋಪಿ ಅತೀಕ್. ಈತ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಎನ್ನಲಾಗಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಸದಸ್ಯನಾಗಿದ್ದ ಅತೀಕ್ ಪ್ರವೀಣನ ಕೊಲೆ ಬಳಿಕ ಆರೋಪಿ ಮುಸ್ತಫಾನಿಗೆ ಆಶ್ರಯ ನೀಡಿ ಸಹಾಯ ಮಾಡಿದ್ದ. ಮುಸ್ತಫಾನನ್ನು ಚೆನ್ನೈಗೆ ಕಳಿಸಿ ಪರಾರಿಯಾಗಲು ನೆರವು ನೀಡಿದ್ದ. ಹೀಗಾಗಿ, ಆತನನ್ನು ಬಂಧಿಸಲಾಗಿದೆ. ಈ ಕುರಿತು ಎನ್​ಐಎಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.

Leave a Reply

Your email address will not be published. Required fields are marked *