ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ನಿಂದಿಸಿದ ಆರೋಪ ಕೇಸಲ್ಲಿ ಬಿಜೆಪಿಯ ಸಿ.ಟಿ.ರವಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಈ ಪ್ರಕರಣ ಸಂಬಂಧ ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಆದೇಶ ನೀಡಿದೆ.
ಈ ಪ್ರಕರಣ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜ.30ಕ್ಕೆ ಮುಂದೂಡಿದೆ. ಈ ಮಧ್ಯೆ, ಸಿಐಡಿ ತಂಡ ತನಿಖೆ ಭಾಗವಾಗಿ ಸ್ಥಳ ಮಹಜರಿಗೆ ಮತ್ತೊಮ್ಮೆ ಪ್ರಯತ್ನ ನಡೆಸಲು ಮುಂದಾಗಿದೆ. ಇದಕ್ಕೆ ಸಭಾಪತಿಗಳು ಗರಂ ಆಗಿದ್ದು, ಪ್ರಕರಣವನ್ನು ಎಥಿಕ್ಸ್ ಕಮಿಟಿಗೆ ಒಪ್ಪಿಸಿ ಆದೇಶಿಸಿ, ಸಿಐಡಿ ತನಿಖೆಯನ್ನು ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.
ನ್ಯಾಯಾಲಯಕ್ಕೂ ಸಹ ಶಾಸಕಾಂಗಕ್ಕೆ ಆದೇಶ ನೀಡುವ ಅಧಿಕಾರ ಇಲ್ಲ. ಇಂತಹದರಲ್ಲಿ ನೀವು ಯಾವ ಆಧಾರದ ಮೇಲೆ ಸಿಐಡಿ ತನಿಖೆ ಪ್ರಕರಣ ನೀಡಿದ್ದೀರಿ? ಯಾವ ರೀತಿ ಸ್ಥಳ ಮಹಜರು ಮಾಡುತ್ತೀರಿ ಅಂತ ಸಿಐಡಿಗೆ ಪ್ರಶ್ನೆ ಮಾಡಿದ್ದೇನೆ? ಆದರೆ, ಇಲ್ಲಿಯವರೆಗೆ ಯಾವುದೇ ಉತ್ತರ ಬಂದಿಲ್ಲ ಎಂದು ತಿಳಿದು ಬಂದಿದೆ.