ಮುಂಬೈ : ಶಿವಸೇನೆ ಮುಖ್ಯಸ್ಥ ಉದ್ವವ್ ಠಾಕ್ರೆ ಭಾರತೀಯ ಜನತಾ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿ, ಕೋಮು ಸೌಹಾರ್ದತೆಯನ್ನು ಕೆಡಿಸುವ ಯಾರಾದರೂ “ಹಿಂದೂ ಆಗಲು ಸಾಧ್ಯವಿಲ್ಲ” ಎಂದು ಹೇಳುವುದರ ಜೊತೆಗೆ ತಮ್ಮ ಪಕ್ಷದ ಹಿಂದುತ್ವ ಶುದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತಪತ್ರಗಳ ಮೇಲೆ ಚುನಾವಣೆ ನಡೆಸುವ ಬಗ್ಗೆಯೂ ಸವಾಲು ಹಾಕಿದರು. ಶಿವಸೇನೆ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ, ನಿಮಗೆ ನಾಚಿಕೆ ಇದ್ದರೆ, ಇವಿಎಂಗಳನ್ನು ಪಕ್ಕಕ್ಕೆ ಇರಿಸಿ ಮತಪತ್ರಗಳನ್ನು ಬಳಸಿ ಚುನಾವಣೆಗಳನ್ನು ನಡೆಸಿ. ಹಿಂದೂ-ಮುಸ್ಲಿಂ ದ್ವೇಷವನ್ನು ಹರಡುವ ಯಾರಾದರೂ ಹಿಂದೂ ಆಗಲು ಸಾಧ್ಯವಿಲ್ಲ. ನಮ್ಮ ಹಿಂದುತ್ವ ಶುದ್ಧವಾಗಿದೆ ಎಂದು ವಾಗ್ದಾಳಿ ನಡೆಸಿದರು.