ಬೆಂಗಳೂರು : ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ವರ್ಷ ಏಪ್ರಿಲ್ 4ರಿಂದ ಏಪ್ರಿಲ್ 14 ರವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ.

ಬೆಂಗಳೂರು ಕರಗ ಸಂಬಂಧ ಸೋಮವಾರ ರಾತ್ರಿ ಸಭೆ ನಡೆಯಿತು. ಈ ಸಭೆಯಲ್ಲಿ, ಕರಗ ಹೊರುವ ಪೂಜಾರಿಯಾಗಿ ಎ.ಜ್ಞಾನೇಂದ್ರ ಒಮ್ಮತದಿಂದ ಆಯ್ಕೆಯಾದರು. ಇವರು 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿದ್ದಾರೆ. ಈ ವರ್ಷ ದ್ರೌಪದಿ ದೇವಿ ಕರಗ ಹೊತ್ತರೆ ಹದಿನೈದು ಬಾರಿ ಕರಗ ಹೊತ್ತಂತೆ ಆಗಲಿದೆ. ಈ ವರ್ಷ ಅವರು ಕೊನೆಯ ಬಾರಿ ಕರಗ ಹೊರಲಿದ್ದಾರೆ.

ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಣಾಧಿಕಾರಿ ನವೀನ್, ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್, ಖಜಾಂಚಿ ಜಿ.ಬಾಲಕೃಷ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯ ಅಮರನಾರಾಯಣ ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *