ಜಾತಿ ದೌರ್ಜನ್ಯ ಪ್ರಕತಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಸಿಎಂ ಸೂಚನೆ ನೀಡಿದರು.

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹಲವು ದಶಕಗಳಿಂದ ಶೇ 3ಕ್ಕಿಂತ ಹೆಚ್ಚಾಗಿಲ್ಲ. ಈ ಕಾರಣಕ್ಕೂ ನಾನು ಡಿಸಿಎಆರ್​​ಇ ಸೆಲ್​​ಗಳಿಗೆ ಪೊಲೀಸ್ ಠಾಣೆ ಶಕ್ತಿ ನೀಡಿದ್ದಾಗಿದೆ. ಇನ್ನೂ ಶಿಕ್ಷೆ ಪ್ರಮಾಣ ಹೆಚ್ಚಾಗದಿದ್ದರೆ ಹೇಗೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಈ ಪ್ರಕರಣಗಳ ತನಿಖೆಯ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ. ಕೌಂಟರ್ ಕೇಸ್​ಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಾಗಿದೆಯೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಮುಖ್ಯ ಕಾರ್ಯದರ್ಶಿಗಳು, 3 ವಿಶೇಷ ನ್ಯಾಯಾಲಯಗಳಿಗೆ ಮಾತ್ರ ಅನುಮತಿ ಸಿಕ್ಕಿದೆ. ಇನ್ನೂ 24 ವಿಶೇಷ ನ್ಯಾಯಾಲಯಗಳಿಗೆ ಅನುಮತಿ ದೊರೆತಿಲ್ಲ. ಬಳಿಕ ಈ ಬಗ್ಗೆ ಕ್ರಮ ಕೈಗೊಂಡು ಬಾಕಿ ನ್ಯಾಯಾಲಯಗಳಿಗೆ ಬೇಗ ಅನುಮತಿ ಸಿಗುವಂತೆ ಮಾಡುವ ದಿಸೆಯಲ್ಲಿ ಗಮನ ಹರಿಸುವುದಾಗಿ ತಿಳಿಸಿದರು.

Leave a Reply

Your email address will not be published. Required fields are marked *