ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಕ್ರಿಯಾ ಸಮಿತಿ ಅಡಿಯಲ್ಲಿ ನಡೆಯುತ್ತಿರುವ ಮಹಿಳೆಯರ ಅಹೋರಾತ್ರಿ ಧರಣಿ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪ ಮಾಡಿದರು.
ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಬೇಕು, ದೇವದಾಸಿ ಮಹಿಳೆಯರ ಸ್ಥಿತಿ ಗತಿ ಬಗ್ಗೆ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು ಎನ್ನುವುದು ಪ್ರತಿಭಟನಾ ನಿರತರ ಬೇಡಿಕೆಯಾಗಿದೆ. ಈ ವಿಚಾರವಾಗಿ ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆದರು. ದೇವದಾಸಿ ಸಮಸ್ಯೆ ಮತ್ತು ಪುನರ್ವಸತಿ ಬಗ್ಗೆ ಸಮಗ್ರ ವರದಿ ಸಿದ್ದಪಡಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದರು.
ಈ ಸಭೆಯಲ್ಲಿ ಸಚಿವರಾದ ಹೆಚ್ಸಿ ಮಹದೇವಪ್ಪ, ಕೆಎನ್ ರಾಜಣ್ಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ವಿಧಾನಪರಿಷತ್ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎಸ್ಸಿ ಎಸ್ಟಿ ಸಮುದಾಯದ ಶಾಸಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.