ಆಂಧ್ರ ಪ್ರದೇಶ : ವೈಕುಂಠ ಏಕಾದಶಿ ಸಮಯದಲ್ಲಿ ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಆರು ಮಂದಿ ಮೃತಪಟ್ಟ ದುರ್ಘಟನೆಗೆ ಸಂಬಂಧಿಸಿದಂತೆ ಇಂದು ಸಿಎಂ ಚಂದ್ರಬಾಬು ನಾಯ್ಡು ಪರಿಶೀಲನಾ ಸಭೆ ಕರೆದಿದ್ದಾರೆ ಎಂದು ಟಿಡಿಪಿ ವಕ್ತಾರರು ತಿಳಿಸಿದ್ದಾರೆ.
ಮೃತರ ಕುಟುಂಬಸ್ಥರನ್ನು ಅವರು ಇಂದು ಭೇಟಿ ಮಾಡುವ ನಿರೀಕ್ಷೆಯಿದೆ. ತಿರುಪತಿ ಕಾಲ್ತುಳಿತ ಘಟನೆಯಂತಹ ದುರ್ಘಟನೆಯನ್ನು ಭವಿಷ್ಯದಲ್ಲಿ ತಪ್ಪಿಸಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಮೃತರ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ಮತ್ತು ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಟಿಡಿಪಿ ವಕ್ತಾರ ಪ್ರೇಮ್ ಕುಮಾರ್ ಜೈನ್ ತಿಳಿಸಿದ್ದಾರೆ.
ಭಾರೀ ಸಂಖ್ಯೆಯಲ್ಲಿ ಭಕ್ತರು ಟೋಕನ್ ಪಡೆದುಕೊಳ್ಳಲು ಯತ್ನಿಸಿದ ಪರಿಣಾಮ ನೂಕುನುಗ್ಗಲು ಉಂಟಾಯಿತು. ಘಟನೆಯಲ್ಲಿ ಒಟ್ಟು 20 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ರುಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.