ಬೆಂಗಳೂರು : ಯುವಕನೋರ್ವ ಸ್ನೇಹಿತೆಯನ್ನು ಭೇಟಿಯಾಗಲು ಬುರ್ಖಾ ಧರಿಸಿ ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಕಾಲೇಜು ಆವರಣದಲ್ಲಿ ನಡೆದಿದೆ.
ಜ್ಞಾನಭಾರತಿ ಕಾಲೇಜಿನ ರಮಾಬಾಯಿ ಹಾಸ್ಟೆಲ್‌ಗೆ ನಿನ್ನೆ ರಾತ್ರಿ ಯುವಕ ಬುರ್ಖಾ ಧರಿಸಿ ಪ್ರವೇಶಿಸಿದ್ದ. ಬುರ್ಖಾ ಧರಿಸಿದ ಯುವಕನನ್ನ ಮಾಲೂರು ಮೂಲದವನು ಎನ್ನಲಾಗಿದೆ. ಯುವಕನ್ನು ಕಂಡ ವಿದ್ಯಾರ್ಥಿನಿಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ಸ್ಥಳಕ್ಕಾಗಮಿಸಿದ ಜ್ಞಾನಭಾರತಿ ಠಾಣೆಯ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದರು. ವಿದ್ಯಾರ್ಥಿನಿಯರಿರುವ ಹಾಸ್ಟೆಲ್‌ಗೆ ನುಗ್ಗಿರುವ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದಾಗ ಸ್ನೇಹಿತೆಯಿಂದಲೇ ಬಟ್ಟೆ ತೆಗೆದುಕೊಂಡು ಹಾಸ್ಟೆಲ್‌ಗೆ ನುಗ್ಗಿದ್ದ ಯುವಕನಿಗೆ ಉಳಿದುಕೊಳ್ಳಲು ಸ್ಥಳವಿಲ್ಲದ ಕಾರಣ ಆಕೆಯೇ ಹಾಸ್ಟೆಲ್‌ನಲ್ಲಿ ವ್ಯವಸ್ಥೆ ಮಾಡಿರುವುದು ತಿಳಿದುಬಂದಿದೆ.
ಮುಂಜಾಗ್ರತ ಕ್ರಮವಾಗಿ ಹುಡುಗಿಯರ ಹಾಸ್ಟೆಲ್‌ಗೆ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.