ಕ್ಷುಲಕ ವಿಚಾರಕ್ಕೆ ಯುವಕನೋರ್ವನ ಮೇಲೆ ಮತ್ತೋರ್ವ ಯುವಕ ಹಲ್ಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕಬ್ಬೆನೂರು ಗ್ರಾಮದಲ್ಲಿ ನಡೆದಿದ್ದು, ಹಲ್ಲೆ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಧಾರವಾಡ ತಾಲೂಕಿನ ಕಬ್ಬೆನೂರು ಗ್ರಾಮದ ಸಂತೋಷ್ ತಳವಾರ, ಅರವಿಂದ ಕೆಂಗಾನೂರ ಎಂಬಾತರು ಶಿವಾನಂದ ಮಾದರ ಎಂಬಾತನ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಹಲ್ಲೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯಾವ ಕಾರಣಕ್ಕಾಗಿ ಹಲ್ಲೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದು ಬರಬೇಕಾಗಿದೆ. ಇನ್ನೂ ಯುವಕರಿಬ್ಬರು ಸೇರಿ ಮನಬಂದಂತೆ ಥಳಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ.

Leave a Reply

Your email address will not be published. Required fields are marked *