ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್​ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್​ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಜನವರಿ 27ಕ್ಕೆ ಮುಂದೂಡಿದೆ.

ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮತ್ತು ಮನು ಸಿಂಘ್ವಿ, ರಾಜ್ಯ ಸರ್ಕಾರದ ಪರ‌ವಾಗಿ ಕಪಿಲ್‌ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ಮತ್ತು ಹಿಂದಿನ ಭೂ ಮಾಲೀಕ ದೇವರಾಜು ಪರ ದುಷ್ಯಂತ್ ದವೆ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಪರ ಮಣೀಂದರ್ ಸಿಂಗ್ ಅವರು ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ವಾದ ಮಂಡಿಸಿದರು.

ಈ ವಿಚಾರಣೆ ಆರಂಭದಲ್ಲೇ ಹೈಕೋರ್ಟ್​, ಸಿಬಿಐ ತನಿಖೆಗೆ ವಹಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ವಾದ ಸೀಮಿತಗೊಳಿಸಿ ಎಂದು ಎರಡೂ ಕಡೆ ವಕೀಲರಿಗೆ ಸೂಚನೆ ನೀಡಿತು. ಈವರೆಗಿನ ತನಿಖೆ ವರದಿ ಸಲ್ಲಿಸಿಲ್ಲವೇಕೆ? ನಾಳೆಯೊಳಗೆ ಈವರೆಗಿನ ತನಿಖೆ ವರದಿ ಸಲ್ಲಿಸಿ ಎಂದು ಲೋಕಾಯುಕ್ತ ಪೊಲೀಸರ ಪರ ವಕೀಲ ವೆಂಕಟೇಶ್ ಅರಬಟ್ಟಿ ಅವರಿಗೆ ಸೂಚಿಸಿತು.

Leave a Reply

Your email address will not be published. Required fields are marked *