ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗದ್ದುಗೆ ಪೈಪೋಟಿಗೆ ಇಂದು ತೆರೆ ಬೀಳಲಿದೆ. ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಆರಂಭಿಕ ಹಂತದಲ್ಲಿ ಇದೀಗ ಬಿಜೆಪಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸುಮಾರು ಮೂವತ್ತು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಬಿಜೆಪಿ ಈಗಾಗಲೇ ಬಹುಮತಕ್ಕಿಂತ ಹೆಚ್ಚಿನ ಸಂಖ್ಯೆಯ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವುದರಿಂದ, ಪಕ್ಷದ ಕಾರ್ಯಕರ್ತರಲ್ಲಿ ಸಂಭ್ರಮ ಕಾಣಿಸಿದೆ. ದೆಹಲಿಯ ವಿವಿಧ ಕಡೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.