ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಸರ್ವಧರ್ಮದ ಸೌಹಾರ್ದತೆ ಸಭೆಯನ್ನು ನಡೆಸಲಾಯಿತು.
ಹುಬ್ಬಳ್ಳಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಶಿಖ್ ಸೇರಿದಂತೆ ಸರ್ವ ಧರ್ಮದ ಧರ್ಮ ಗುರುಗಳ ನೇತೃತ್ವದಲ್ಲಿ ಶಾಂತಿ ಸೌಹಾರ್ದತೆಯ ಸಭೆಯನ್ನು ನಡೆಸಲಾಗಿದ್ದು, ಎಲ್ಲರೂ ಕೂಡ ಶಾಂತಿಯುತ ರೀತಿಯಲ್ಲಿ ಹಬ್ಬ ಆಚರಣೆ ಮಾಡುವಂತೆ ಕರೆ ನೀಡಲಾಯಿತು. ನಾವೆಲ್ಲರೂ ಭಾರತೀಯರು ಎಂಬುವುದೊಂದೆ ಗಮನದಲ್ಲಿಟ್ಟುಕೊಂಡು ಸೌಹಾರ್ದತೆಯಿಂದ ಹಬ್ಬಗಳನ್ನು ಸಹೋದರತ್ವದೊಂದಿಗೆ ಆಚರಿಸಲು ಧರ್ಮ ಗುರುಗಳು ಸಲಹೆ ನೀಡಿದರು.
ಇನ್ನೂ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಬ್ಬವನ್ನು ಆಚರಿಸಬೇಕು. ಯಾವುದೇ ಸಮಾಜಕ್ಕೆ ದಕ್ಕೆ ತರುವ ಶಾಂತಿ ಹಾಳು ಮಾಡುವ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸುವ ಬಗ್ಗೆ ಸೂಚನೆ ನೀಡಿದ್ದಾರೆ.
ಒಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಶಾಂತಿ ಸೌಹಾರ್ದತೆಯಿಂದ ಒಕ್ಕಟ್ಟಾಗಿ ಮಾಡಬೇಕು ಎಂದು ನಿರ್ಧಾರ ಮಾಡಿದ್ದು, ಸೌಹಾರ್ದತೆ ಸಭೆ ಯಶಸ್ವಿಯಾಗಿ ಪೂರ್ಣಗೊಂಡಿತು.