ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಬಳಿಯಲ್ಲಿ ಗಾಂಜಾ ಮಾರಾಟ ಮಾಡಲು ಮುಂದಾಗಿದ್ದ, ಅಂತರಾಜ್ಯ ಗಾಂಜಾ ಮಾರಾಟಗಾರನೊಬ್ಬನನ್ನು ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹು-ಧಾ ಕಮಿಷನರ್ ಎನ್ ಶಶಿಕುಮಾರ್ ಹೇಳಿದರು.
ಈ ಕುರಿತು ನಗರದ ಉಪನಗರ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ರಾಜಸ್ಥಾನ ಮೂಲದ ವ್ಯಕ್ತಿಯೋರ್ವ ನಗರದ ರೈಲ್ವೆ ನಿಲ್ದಾಣ ಬಳಿಯಿರುವ ಬೋಗಿ ಬೋಗಿ ಹೊಟೇಲ ಬಳಿ ಗಾಂಜಾ ಮಾರಾಟ ಮಾಡಲು ಬರುತ್ತಿದ್ದಾನೆಂಬ ಖಚಿತ ಮಾಹಿತಿ
ಮೇರೆಗೆ, ದಕ್ಷಿಣ ಎಸಿಪಿಯವರ ನೇತೃತ್ವದಲ್ಲಿ ಶಹರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎಮ್.ಎಮ್. ತಹಶಿಲ್ದಾರ, ಪಿಎಸ್ಐ ಮಾರುತಿ ಅವರನ್ನು ಒಳಗೊಂಡ ತಂಡ ಮಾಹಿತಿ ಬಂದ ಸ್ಥಳದ ಮೇಲೆ ದಾಳಿ ಮಾಡಿ ಬಂಧನ ಓರ್ವನನ್ನು ಮಾಡಿದ್ದಾರೆ. ಬಂಧಿತ ಆರೋಪಿ ರಾಜಸ್ಥಾನ ಮೂಲದ ಓಂಪ್ರಕಾಶ್ ವೀರಮಾರಾಮ ಬಾರಮೇರ ಎಂಬಾತನಾಗಿದ್ದಾನೆ.
ಬಂಧಿತನಿಂದ 85,000 ರೂ. ಮೌಲ್ಯದ 888 ಗ್ರಾಂ ಗಾಂಜಾ, 9 ಲಕ್ಷ ರೂ. ಮೌಲ್ಯದ ಒಂದು ಕೀಯಾ ಸೋನೆಟ್ ಕಾರು, 50,000 ರೂ. ಮೌಲ್ಯದ ಒಂದು ಐಫೋನ್, ವಿವಿಧ ಬ್ಯಾಂಕಿನ 30 ಎಟಿಎಂ ಕಾರ ವಿವಿಧ ಬ್ಯಾಂಕಿನ 36 ಚೆಕ್ ಬುಕ್, 4 ಪಾಸ್ ಬುಕ್, 9 ಪಾನ್ ಕಾರ್ಡ್, 7 ವಿವಿಧ ರಬ್ಬರ್ ಸ್ಟಾಂಪ್, 6 ಸ್ಟಾಪಿಂಗ್ ಮಷೀನ್ ಗಳನ್ನು ಹಾಗೂ 96,50,000 ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಒಟ್ಟಾರೆಯಾಗಿ ಬಂಧಿತನಿಂದ 1,06,85,000 ರೂ. ಮೌಲ್ಯದ ಹಣ ಹಾಗೂ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ರಾಜಸ್ಥಾನದಲ್ಲಿ ನಕಲಿ ಆಧಾರ ಕಾರ್ಡ್ ಮಾಡಿಸಿಕೊಂಡಿದ್ದ, ಈ ಮೊದಲು ಗೋವಾದಲ್ಲಿ ಗಾಂಜಾ ದಂಧೆಗೆ ಇಳಿಯಲು ಮೂರು ತಿಂಗಳು ಕಾಲ ತರಬೇತಿ ಪಡೆದಿದ್ದ ಎಂದು ತಿಳಿದು ಬಂದಿದೆ. ಕೇಶ್ವಾಪೂರ ವ್ಯಾಪ್ತಿಯಲ್ಲಿ ಆತ ವಾಸವಾಗಿದ್ದ, ಯಾವುದೇ ಕೆಲಸದಲ್ಲಿ ತೊಡಗಿಲ್ಲ ಈತನ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆ ಮಾಡಲಾಗುವುದು ಎಂದರು. ಇನ್ನೂ ಅವಳಿನಗರದಲ್ಲಿ ಅಧಿಕಾರವಹಿಸಕೊಂಡ ಮೇಲೆ ೧೨ ಕ್ಕೂ ಹೆಚ್ಚು ಪ್ರಮುಖ ಪ್ರಕರಣ ದಾಖಲಿಸಿ ೬೧ ಗಾಂಜಾ ಪೆಡ್ಲರ್ ಗಳನ್ನು ಬಂಧಿಸಲಾಗಿದೆ. ೩೧೫ ಕ್ಕೂ ಹೆಚ್ಚು ಗಾಂಜಾ ಸೇವಕರನ್ನು ವಶಕ್ಕೆ ಪಡೆಯಲಾಗಿದೆ. ಮುಂದಿನ ದಿನಗಳಲ್ಲಿ ಶಾಲಾ-ಕಾಲೇಜಗಳಲ್ಲಿ ಜಾಗೃತಿ ಮೂಡಿಸಲಾಗುವುದು. ಜತೆಗೆ ಅವಳಿ ನಗರವಮ್ಮು ಗಾಂಜಾ ಮುಕ್ತ ನಗರ ಮಾಡಲು ಪಣತೊಟ್ಟಿದ್ದೇವೆ ಎಂದು ತಿಳಿಸಿದರು.