ಓರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು
ಕಳೆದ 20ನೇ ತಾರೀಕಿನಂದು ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಹಗರಗುಂಡ ಗ್ರಾಮದಲ್ಲಿ ನಡೆದ ಘಟನೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಿಗೆ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥ ಸೋಮಪ್ಪ ಸಿದ್ದಪ್ಪ ಗಾಡಿ ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಅನ್ವಯ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ನೇತೃತ್ವದ ತಂಡ ಅದೇ ಗ್ರಾಮದ ಯಲ್ಲಾಲಿಂಗ ಸಿದ್ದಪ್ಪ ಚಿಗರಿ. ಎಂಬಾತನನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆ ಕರೆದುಕೊಂಡು ಹೋಗಿ ವಿಚಾರಿಸಿದಾಗ ರಾಯಣ್ಣನ ಭಾವಚಿತ್ರ ಅಪಮಾನಿಸಿದ್ದಾಗಿ ಒಪ್ಪಿಕೊಂಡಿದ್ದು ಆತನ ದಸ್ತಗಿರಿ ಮಾಡಲಾಗಿದೆ ಎಂದು ಎಸ್ಪಿ ಹೃಷಿಕೇಶ್ ಸೋನಾವಣೆ ತಿಳಿಸಿದ್ದಾರೆ.