ರಾಯಚೂರು : ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಬಾಣಂತಿಯನ್ನು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಸರಸ್ವತಿ (24) ಎಂದು ಗುರುತಿಸಲಾಗಿದೆ.
ಜ.2 ರಂದು ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆಯಾಗಿತ್ತು. ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಜ.5 ಸಾವನ್ನಪ್ಪಿದ್ದಾರೆ. ಸದ್ಯ ವೆಂಟಿಲೇಟರ್‌ನಲ್ಲಿ ಶಿಶುವಿಗೆ ಚಿಕಿತ್ಸೆ ಮುಂದುವರೆದಿದೆ. ನಾಲ್ಕನೇ ಮಗುವಿಗೆ ಜನ್ಮ ನೀಡಿದ್ದ ತಾಯಿ ಸರಸ್ವತಿ ಸಾವಿನಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಈ ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಒಟ್ಟು 12 ಬಾಣಂತಿಯರು ಮೃತಪಟ್ಟಿರುವುದು ವರದಿಯಾಗಿದೆ.