ಬೆಂಗಳೂರು : ರಾಜ್ಯದ ನಾಲ್ಕು ಬಸ್ ನಿಗಮಗಳು ಶೇ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು.

ನಿಗಮಗಳು ಸುಮಾರು ಆರು ತಿಂಗಳ ಹಿಂದೆ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪ್ರಸ್ತಾವನೆಯನ್ನು ಕಳುಹಿಸಿದೆ ಎಂದು ರಾಮಲಿಂಗಾ ರೆಡ್ಡಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಪ್ರಸ್ತಾವನೆ ಕುರಿತು ಸರ್ಕಾರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ), ಮತ್ತು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಅಧಿಕಾರಿಗಳು ದರ ಪರಿಷ್ಕರಣೆ ಅಗತ್ಯವನ್ನು ಒತ್ತಿ ಹೇಳಿದರು. ನಿಗಮಗಳಿಂದ ಉಂಟಾದ ನಷ್ಟವನ್ನು ಸಮತೋಲನಗೊಳಿಸಲು ಮೊದಲನೆಯ ಆದ್ಯತೆಯಾಗಿದೆ ಎಂದಿದ್ದಾರೆ.

ಬಾಕಿ ಇರುವ ವೇತನವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಡಿ.31 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಆರ್‌ಟಿಸಿ ಯೂನಿಯನ್‌ಗಳ ಸದಸ್ಯರು ಬೆದರಿಕೆ ಹಾಕಿದ್ದರು. ‘ನಾಲ್ಕು ನಿಗಮಗಳಲ್ಲಿ ಹಣದ ಕೊರತೆಯೂ ಬಾಕಿ ವೇತನ ಸಂಗ್ರಹಕ್ಕೆ ಒಂದು ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂಧನ, ಬಿಡಿ ಭಾಗಗಳು ಮತ್ತು ಟೈರ್‌ಗಳ ಬೆಲೆಗಳು ಹೆಚ್ಚಾಗಿದ್ದು, ಹೆಚ್ಚಿನ ಆದಾಯವು ಉದ್ಯೋಗಿಗಳ ಸಂಬಳಕ್ಕೆ ಹೋಗುತ್ತದೆ ಎಂದು ಅವರು ಹೇಳಿದರು. “ಉತ್ಪಾದಿತ ಆದಾಯದ ಶೇ.45ಕ್ಕಿಂತ ಹೆಚ್ಚು ಡೀಸೆಲ್‌ಗೆ ಖರ್ಚು ಮಾಡಲಾಗಿದೆ. ಕೆಎಸ್‌ಆರ್‌ಟಿಸಿಯಲ್ಲಿ ಕಳೆದ ಬಾರಿ ಬಸ್‌ ದರ ಪರಿಷ್ಕರಣೆಯಾದಾಗ ಡೀಸೆಲ್‌ ದರ ಲೀಟರ್‌ಗೆ 61 ರೂ. ಇತ್ತು. ಆದರೆ ಡೀಸೆಲ್ ಬೆಲೆ ಈಗ ಲೀಟರ್‌ಗೆ 90 ರೂ. ಆಗಿದೆ ಆದರೆ ಪ್ರಯಾಣ ದರಗಳು ಹಾಗೆಯೇ ಉಳಿದಿವೆ. ಹೆಚ್ಚುತ್ತಿರುವ ಕಾರ್ಯಾಚರಣೆಯ ವೆಚ್ಚದಿಂದಾಗಿ ಅವರು ಪ್ರಯಾಣ ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ.

ಸರ್ಕಾರವೂ ಪ್ರಯಾಣ ದರ ಏರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು ನಿಗಮಗಳನ್ನು ಉಳಿಸಿಕೊಳ್ಳಲು ಈ ಬಾರಿ ಪರಿಷ್ಕರಣೆ ಮಾಡಲಾಗುವುದು ಎಂದರು. ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಬೆದರಿಕೆ ಹಾಕಿರುವ ಆರ್‌ಟಿಸಿ ಯೂನಿಯನ್‌ಗಳು ಕೂಡ ಪ್ರಯಾಣ ದರವನ್ನು ಪರಿಷ್ಕರಿಸುವಂತೆ ಒತ್ತಾಯಿಸಿವೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *