ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

ದೆಹಲಿ ವಿಧಾನಸಭಾ ಫಲಿತಾಂಶದ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಿ ಮೋದಿ ಅವರು, ಗೃಹ ಸಚಿವ ಅಮಿತ್ ಶಾ ಅವರು ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದು ತಿಳಿಸಿದರು.

ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ಧಿಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ ಎಂದು ಪ್ರತಿಪಾದಿಸಿದರು.

ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಹೇಳಿದರು.

Leave a Reply

Your email address will not be published. Required fields are marked *