ಹುಬ್ಬಳ್ಳಿ : ವಿವಿಧ ಕಾರ್ಯಾಚರಣೆಯ ಕಾರಣಗಳಿಂದಾಗಿ, ಈಗಾಗಲೇ ತಾತ್ಕಾಲಿಕವಾಗಿ ರದ್ದುಗೊಂಡಿರುವ ಕೆಲವು ರೈಲು ಸೇವೆಗಳ ರದ್ದತಿಯನ್ನು ವಿಸ್ತರಲಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

ಮಿರಜ್-ಕ್ಯಾಸಲ್ ರಾಕ್ ರೈಲುಗಳ ಭಾಗಶಃ ರದ್ದತಿ ವಿಸ್ತರಣೆ – ಹುಬ್ಬಳ್ಳಿ ರೈಲ್ವೆ ವಿಭಾಗದ ಕ್ಯಾಸಲ್ ರಾಕ್-ಲೋಂಡಾ ಭಾಗದಲ್ಲಿ ನಡೆಯ ತಿರುವ ರೈಲ್ವೆ ವಿದ್ಯುದೀಕರಣ ಮತ್ತು ಎಂಜಿನಿಯರಿಂಗ್ ಕಾಮಗಾರಿಗಳಿಂದಾಗಿ, ಈ ಕೆಳಗಿನ ರೈಲು ಸೇವೆಗಳ ಭಾಗಶಃ ರದ್ದತಿಯನ್ನು ವಿಸ್ತರಿಸಲಾಗಿದೆ.

11 ದಿನಗಳ ಕಾಲ ಬೆಳಗಾವಿ-ಮಿರಜ್ ಕಾಯ್ದಿರಿಸದ ವಿಶೇಷ ರೈಲು ಭಾಗಶಃ ರದ್ದು – ಕುಡಚಿ-ಉಗಾರ ಖುರ್ದ್ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕೆಳಗಿನ ರೈಲುಗಳನ್ನು 11 ದಿನಗಳ ಕಾಲ ಕುಡಚಿ-ಮಿರಜ್ ನಿಲ್ದಾಣಗಳ ನಡುವೆ ಭಾಗಶಃ ರದ್ದು ಗೊಳಿಸಲಾಗಿದೆ ಎಂದು ರೈಲ್ವೆ ವಲಯ ತಿಳಿಸಿದೆ.

Leave a Reply

Your email address will not be published. Required fields are marked *