Author: Rebel Tv

ವಂಚನೆ ಆರೋಪ: ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ಎಫ್​ಐಆರ್

ಸಿನಿಮಾ ನಿರ್ದೇಶಕಿ, ಮೋಟಿವೇಷನಲ್ ಸ್ಪೀಕರ್, ಮ್ಯಾನಿಫೆಸ್ಟೇಷನ್ ಕೋಚ್ ಎಂದೆಲ್ಲ ತಮ್ಮನ್ನು ತಾವು ಪರಿಚಯಿಸಿಕೊಂಡಿದ್ದ ವಿಸ್ಮಯ ಗೌಡ ವಿರುದ್ಧ ವಂಚನೆ ಪ್ರಕರಣವನ್ನು ಬಸವೇಶ್ವರನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹಿಮಾನ್ವಿ ಎಂಬುವರು ನ್ಯಾಯಾಲಯದಲ್ಲಿ ದಾಖಲಿಸಿದ್ದ, ಖಾಸಗಿ ದೂರಿನ ಮೇರೆಗೆ ನಟಿಯ ವಿರುದ್ಧ ಎಫ್​ಐಆರ್ ದಾಖಲಿಸುವಂತೆ…

ಪಾಕ್‌ನ ಬಲೂಚಿಸ್ತಾನದಲ್ಲಿ ಐಇಡಿ ಸ್ಫೋಟ !

ಇಸ್ಲಾಮಾಬಾದ್ : ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯ ಮಾರುಕಟ್ಟೆಯಲ್ಲಿ ಮೋಟಾರ್‌ಬೈಕಿಗೆ ಹಾಕಲಾಗಿದ್ದ ಐಇಡಿ ಸ್ಫೋಟಗೊಂಡು ಘಟನೆಯಲ್ಲಿ ಐವರು ಸಾವನಪ್ಪಿದ್ದಾರೆ. ಈ ಘಟನೆಯಲ್ಲಿ ಕೆಲವು ಮಂದಿಗಳು ಗಾಯಗೊಂಡಿದ್ದಾರೆ ಎಂದು ತಿಳಿದಿದೆ. ನಾಲ್ ಪೊಲೀಸ್ ಠಾಣೆ ಅಧಿಕಾರಿ ಬಹಾವಲ್ ಖಾನ್ ಪಿಂದ್ರಾನಿ ಅವರು ಸಾವು-ನೋವುಗಳ ಬಗ್ಗೆ…

ವಿಧಾನಸಭೆಯ ಬಾಗಿಲಲ್ಲಿ ಪಾನ್ ಉಗುಳಿದ ವಿಚಾರ – ಆವರಣದೊಳಗೆ ಪಾನ್ ನಿಷೇಧ !

ಉತ್ತರ ಪ್ರದೇಶ : ಶಾಸಕರೊಬ್ಬರು ಉತ್ತರ ಪ್ರದೇಶ ವಿಧಾನಸಭೆಯ ಬಾಗಿಲಿನಲ್ಲಿ ಪಾನ್ ಉಗುಳಿರುವ ವಿಚಾರಕ್ಕೆ ಸಂಬಂಧಿಸಿದ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ವಿಧಾನಸಭಾ ಆವರಣದಲ್ಲಿ ಪಾನ್ ಮಸಾಲ ಬ್ಯಾನ್​ ಮಾಡಲಾಗಿದೆ. ತಕ್ಷಣದಿಂದ ಜಾರಿಗೆ ಬರಲಿರುವ ನಿಷೇಧದ ಜೊತೆಗೆ, ಉಲ್ಲಂಘಿಸುವವರಿಗೆ 1,000 ರೂ.ಗಳ…

ಚಿನ್ನ ಸಾಗಾಟಕ್ಕೆ ರನ್ಯಾಗೆ ಕಮಿಷನ್ – ನಟಿ ಪಾತ್ರಧಾರಿ, ಅಸಲಿ ಕಿಂಗ್‌ಪಿನ್ ಬೇರೆ!

ಬೆಂಗಳೂರು : ಚಿನ್ನ ಕಳ್ಳಸಾಗಣೆಯಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ.ನಟಿ ರನ್ಯಾರನ್ನು ಬಂಧಿಸಿರುವ ಡಿಆರ್‌ಐ ಅಧಿಕಾರಿಗಳ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗಿವೆ. ರನ್ಯಾ ಕೇವಲ ಪಾತ್ರಧಾರಿ, ಅಸಲಿ ಕಿಂಗ್ ಬೇರೆಯೇ ಇದ್ದಾರೆ ಎಂದು…

ನಾಳೆ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ

ನವದೆಹಲಿ/ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಶುಕ್ರವಾರ) ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಾರತ್ತ​​ಹಳ್ಳಿಯಲ್ಲಿ ನಡೆಯಲಿರುವ ‘‘ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ’’ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ‌, ಮಾಜಿ…

ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ ಖಲಿಸ್ತಾನಿ ಉಗ್ರ ಯುಪಿಯಲ್ಲಿ ಬಂಧನ !

ಲಕ್ನೋ : ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್‌ನ ಸಕ್ರಿಯ ಭಯೋತ್ಪಾದಕನನ್ನು ಉತ್ತರ ಪ್ರದೇಶ ಎಸ್‌ಟಿಎಫ್ ಮತ್ತು ಪಂಜಾಬ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಗುರುವಾರ ಮುಂಜಾನೆ ಕೌಶಂಬಿ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಪಂಜಾಬ್‌ನ ಅಮೃತಸರದ ರಾಮದಾಸ್ ಪ್ರದೇಶದ…

ಭ್ರಷ್ಟ ಅಧಿಕಾರಿಗಳಿಗೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್‌ !

ಬೆಂಗಳೂರು : ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್‌ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಜಿಆರ್‌ಪಿಎ ಚೀಫ್‌ ಎಂಜಿನಿಯರ್ ನಂಜುಂಡಪ್ಪ ಮತ್ತು ಬಿಬಿಎಂಪಿ ಎಕ್ಸಿಕ್ಯೂಟಿವ್ ಎಂಜಿನಿಯರ್‌‌ ಹೆಚ್‌.ಪಿ ಕಲ್ಲೇಶಪ್ಪ ಅವರ ಮನೆಗಳ…

ಕರ್ನಾಟಕದಲ್ಲಿ ಹೆಚ್ಚುತ್ತಿದೆ ಹಕ್ಕಿಜ್ವರ ಆತಂಕ; ಮುಂಜಾಗ್ರತಾ ಕ್ರಮಗಳನ್ನು ಏನು?

ಕರ್ನಾಟಕದಲ್ಲಿ ಹಕ್ಕಿಜ್ವರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಚಿಕ್ಕಬಳ್ಳಾಪುರದ ವರದನಹಳ್ಳಿಯಲ್ಲಿ ಹಕ್ಕಿಜ್ವರದ ಮೊದಲ ಪ್ರಕರಣ ಕಾಣಿಸಿಕೊಂಡಿತು. ಸೋಂಕಿಗೆ ನೂರಾರು ಜೀವಿಗಳು ಬಲಿಯಾದವು. ತಕ್ಷಣ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದೆಲ್ಲೆಡೆ ಹೈಅಲರ್ಟ್ ಘೋಷಿಸಿದೆ. ರಾಜ್ಯಾದ್ಯಂತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು, ಸಾವಿರಾರು ಕೋಳಿಗಳ…

ಕ್ಷೇತ್ರ ಪುನರ್‌ ವಿಂಗಡಣೆ; ತ‌ಮಿಳುನಾಡಿನಲ್ಲಿ ಸರ್ವಪಕ್ಷ ಸಭೆ – ಎಂ.ಕೆ.ಸ್ಟಾಲಿನ್‌

ಚೆನ್ನೈ : ಕ್ಷೇತ್ರ ಪುನರ್‌ ವಿಂಗಡಣೆ ವಿಷಯವನ್ನು ಚರ್ಚಿಸಲು ನಡೆದ ಸರ್ವಪಕ್ಷ ಸಭೆಯಲ್ಲಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಜನಸಂಖ್ಯೆಯ ಆಧಾರದ ಮೇಲೆ ಸಂಸದೀಯ ಕ್ಷೇತ್ರಗಳನ್ನು ಪುನರ್‌ವಿಂಗಡಿಸುವ ಪ್ರಸ್ತಾವಿತ ಕ್ರಮವನ್ನು ಸಾಮೂಹಿಕವಾಗಿ ವಿರೋಧಿಸಲು ದಕ್ಷಿಣ ರಾಜ್ಯಗಳ ಸಂಸದರು ಮತ್ತು ಪಕ್ಷದ ಪ್ರತಿನಿಧಿಗಳ ಜಂಟಿ…

ನಿದ್ರೆ ಮಾತ್ರೆ ಸೇವಿಸಿ ಖ್ಯಾತ ಗಾಯಕಿ ಆತ್ಮಹತ್ಯೆಗೆ ಯತ್ನ !

ದಕ್ಷಿಣ ಭಾರತದ ಸ್ಟಾರ್ ಗಾಯಕಿ ಕಲ್ಪನಾ ರಾಘವೇಂದರ್ ಅವರು ನಿದ್ರೆ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಬಳಿಕ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಗಾಯಕಿಯನ್ನು ದಾಖಲಿಸಲಾಗಿದೆ. ಹೈದರಾಬಾದ್‌ನ ನಿವಾಸದಲ್ಲಿ ಗಾಯಕಿ ಆತ್ಮಹತ್ಯೆಗೆ ಯತ್ನಿಸಿದ್ದು, 2 ದಿನಗಳಿಂದ ಮನೆಯ ಬಾಗಿಲುಗಳು…