Author: Rebel Tv

AAP ಸರ್ಕಾರದಲ್ಲಿ ಹಗರಣ; ಇಂದು ಸರ್ಕಾರದಿಂದ ಸಿಎಜಿ ವರದಿ ಮಂಡನೆ

ನವದೆಹಲಿ : ದೆಹಲಿಯ ಬಿಜೆಪಿ ಸರ್ಕಾರವು ಹಿಂದಿನ ಎಎಪಿ ಆಡಳಿತದ ಕಾರ್ಯಕ್ಷಮತೆಗೆ ಸಂಬಂಧಿಸಿದ 14 ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಗಳನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಲಿದೆ. ಆಪ್ ಸರ್ಕಾರದ ಹಗರಣಗಳು, ಶೀಷ್‌ ಮಹಲ್, ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ…

ರೇಣುಕಾಸ್ವಾಮಿ ಕೊಲೆ ಪ್ರಕರಣ; ಇಂದು ಕೋರ್ಟ್‌ಗೆ ಹಾಜರಾಗಲಿರುವ ನಟ ದರ್ಶನ್ & ಗ್ಯಾಂಗ್

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಇಂದು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಪವಿತ್ರಾಗೌಡ, ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ಕೋರ್ಟ್‌ಗೆ ಹಾಜರಾಗಲಿದ್ದಾರೆ.…

ಮಾರ್ಚ್ 20ರೊಳಗೆ ಬಿಜೆಪಿಗೆ ಹೊಸ ರಾಷ್ಟ್ರಾಧ್ಯಕ್ಷರ ಆಯ್ಕೆ ಸಾಧ್ಯತೆ….!

ನವದೆಹಲಿ : ಬಿಜೆಪಿಗೆ ಇನ್ನೂ ಹೊಸ ರಾಷ್ಟ್ರಾಧ್ಯಕ್ಷರ ಘೋಷಣೆಯಾಗಿಲ್ಲ. ಜೆ.ಪಿ. ನಡ್ಡಾ ಅವರನ್ನೇ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನಾಗಿ ಮುಂದುವರೆಸಲಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ನಡೆಯಲಿದ್ದು, ಜನವರಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಬೇಕಿತ್ತು. ಆದರೆ, ದೆಹಲಿ ವಿಧಾನಸಭಾ ಚುನಾವಣೆಗಳು ಮತ್ತು ಬಾಕಿ ಇರುವ ರಾಜ್ಯ…

ಶಿರೂರು ಗುಡ್ಡ ಕುಸಿತ ದುರಂತ: ಐಆರ್‌ಬಿ ಕಂಪನಿ ವಿರುದ್ಧ ಪ್ರಕರಣ ದಾಖಲು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರಿನಲ್ಲಿ ಜು.16 ರಂದು 11 ಜನರ ಸಾವಿಗೆ ಕಾರಣವಾಗಿದ್ದ, ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಐಆರ್‌ಬಿ ಕಂಪನಿಯ 8 ನಿರ್ದೇಶಕರ ವಿರುದ್ಧ ಎಫ್‌ಐಆರ್ ದಾಖಲಿಸಲು ಅಂಕೋಲಾ ಜೆಎಂಎಫ್‌ಸಿ ನ್ಯಾಯಾಲಯ…

ಸೋಫಿ ಆಲ್‌ರೌಂಡರ್‌ ಆಟ – ಸೂಪರ್‌ ಓವರ್‌ನಲ್ಲಿ ಆರ್‌ಸಿಬಿಗೆ ಸೋಲು

ಮಹಿಳಾ ಪ್ರೀಮಿಯರ್‌ ಲೀಗ್‌ ಇತಿಹಾಸದಲ್ಲಿ ನಡೆದ ಮೊದಲ ಸೂಪರ್‌ ಓವರ್‌ನಲ್ಲಿ ಯುಪಿ ವಾರಿಯರ್ಸ್‌ ಆರ್‌ಸಿಬಿ ವಿರುದ್ಧ ಗೆದ್ದು ಬೀಗಿದೆ. ಸೋಫಿ ಎಕ್ಲೆಸ್ಟೋನ್ ಅವರ ಆಲ್‌ರೌಂಡರ್‌ ಆಟದ ಪ್ರದರ್ಶನದಿಂದ ತವರಿನಲ್ಲಿ ಆರ್‌ಸಿಬಿ ಸೋತಿದೆ. ಕಿಮ್ ಗಾರ್ತ್ ಎಸೆದ ಸೂಪರ್‌ ಓವರ್‌ನಲ್ಲಿ ಯುಪಿ 8…

ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ಆತ್ಮಹತ್ಯೆ !

ಬೆಂಗಳೂರು : ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. ನಂದಿನಿ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನೆನ್ನೆ (ಫೆ.23) ರಾತ್ರಿ 9:30ರ ವೇಳೆಗೆ ಘಟನೆ ನಡೆದಿದ್ದು, ತಡವಾಗಿ…

ಉದಯಗಿರಿ ಗಲಭೆ – ಇಂದು ಮಧ್ಯರಾತ್ರಿವರೆಗೆ ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ !

ಮೈಸೂರು : ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದ ಪ್ರಕರಣದ ಕಿಚ್ಚು ಇನ್ನೂ ಆರಿಲ್ಲ. ಪೊಲೀಸರ ತನಿಖೆ ಇನ್ನೂ ಸಾಗುತ್ತಿದೆ. ಈ ನಡುವೆಯೇ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ಜನ ಜಾಗೃತಿ ಸಮಾವೇಶ…

ಅಮೆರಿಕ 4ನೇ ಹಂತದ ಗಡಿಪಾರು: 12 ಮಂದಿ ಅಕ್ರಮ ವಲಸಿಗರು ಭಾರತಕ್ಕೆ ವಾಪಸ್‌

ನವದೆಹಲಿ : ಅಮೆರಿಕದಿಂದ ಗಡಿಪಾರು ಮಾಡಲಾದ ಭಾರತೀಯ ಅಕ್ರಮ ವಲಸಿಗರ 4ನೇ ಬ್ಯಾಚ್ ಇಂದು ದೆಹಲಿಗೆ ಬಂದಿಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕದ ಮಿಲಿಟರಿ ವಿಮಾನದಲ್ಲಿ ಪನಾಮ ಮೂಲಕ 12 ಭಾರತೀಯರು ತಾಯ್ನಾಡಿಗೆ ಬಂದಿಳಿದಿದ್ದಾರೆ. 12 ಜನರಲ್ಲಿ ನಾಲ್ವರು ಪಂಜಾಬ್‌ನ ಅಮೃತಸರಕ್ಕೆ…

ಹಣ್ಣು ಮತ್ತು ಜೇನು ‌ಮೇಳದಲ್ಲಿ ಗಮನ ಸೆಳೆದ ದುಬಾರಿ ದ್ರಾಕ್ಷಿ !

ಕೊಪ್ಪಳ : ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ 5 ದಿನ ನಡೆಯಲಿರುವ ವಿವಿಧ ಹಣ್ಣು ಹಾಗೂ ಜೇನು ಮೇಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಚಾಲನೆ ನೀಡಿದರು. ಇಂದನಿಂದ ಫೆ.27ರ ವರೆಗೆ ಮೇಳೆ ನಡೆಯಲಿದ್ದು,…

ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರ; ರಾಹುಲ್‌, ಲಕ್ಷ್ಮಿ ಹೆಬ್ಬಾಳ್ಕರ್‌

ಚಾಂಪಿಯನ್ಸ್‌ ಟ್ರೋಫಿಯಲ್ಲಿ ಪಾಕಿಸ್ತಾನ ವಿರುದ್ಧ ಜಯಗಳಿಸಿದ ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಪಾಕಿಸ್ತಾನ ವಿರುದ್ಧ ಭಾರತ ಗೆಲುವು ಸಾಧಿಸುತ್ತಿದ್ದಂತೆ, ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸೇರಿದಂತೆ ಟೀಂ…