ಬೆಂಗಳೂರು : ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್‌ನಲ್ಲಿ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿ ವಂಚಿಸಿ, ಅರೆಸ್ಟ್ ಆಗಿದ್ದ ಐಶ್ವರ್ಯಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡಗೆ ಹೈಕೋರ್ಟ್ ಜಾಮೀನು ನೀಡಿದೆ.
ವಂಚನೆ ಕೇಸ್‌ನಲ್ಲಿ ಚಂದ್ರಾ ಲೇಔಟ್ ಪೊಲೀಸರು ಆರೋಪಿಗಳನ್ನು ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದರು. ಈಗ ಹೈಕೋರ್ಟ್ ಜಾಮೀನು ನೀಡಿದ ಹಿನ್ನೆಲೆ ಆರೋಪಿಗಳನ್ನು ನೆನ್ನೆ ರಾತ್ರಿಯೇ ಪೊಲೀಸ್ ಕಸ್ಟಡಿಯಿಂದ ಬಿಡುಗಡೆ ಮಾಡಲಾಗಿದೆ.
ಆರೋಪಿ ಐಶ್ವರ್ಯ ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ ಸಹೋದರಿ ಅಂತ ಹೇಳಿಕೊಂಡು 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 9ನೇ ಎಸಿಎಂಎಂ ಕೋರ್ಟ್ ಆದೇಶಿಸಿತ್ತು. ಅಲ್ಲಿಂದ ಪೊಲೀಸರು ಇಬ್ಬರು ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದರು ಎನ್ನಲಾಗಿದೆ.