ಬೆಂಗಳೂರು : ಏ.4ರಿಂದ ಏ.14ರವರೆಗೆ ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ ನಡೆಯಲಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಈ ಬಾರಿಯೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ.

ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಎ.ಜ್ಞಾನೇಂದ್ರ, ಈ ಸಲ 15ನೇ ಬಾರಿಗೆ ಕರಗ ಹೊರಲಿದ್ದಾರೆ. ಈ ಬಾರಿ ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. ಏ.4ರಂದು ರಥೋತ್ಸವ ಹಾಗೂ ಧ್ವಜಾರೋಹಣ ನಡೆಯಲಿದ್ದು, ಏ.5ರಿಂದ ಏ.8ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನಡೆಯಲಿದೆ.

ಏ.9ರ ಬುಧವಾರ ಆರತಿ ದೀಪಗಳು, ಏ.10ರ ಗುರುವಾರ ಹಸೀ ಕರಗ, ಏ.11ರ ಶುಕ್ರವಾರ ಹೊಂಗಲು ಸೇವೆ, ಏ.12ರ ಶನಿವಾರದಂದು ಕರಗ ಶಕ್ತ್ಯೋತ್ಸವ ಹಾಗೂ ಧರ್ಮರಾಯಸ್ವಾಮಿ ರಥೋತ್ಸವ, ಏ.13ರ ಭಾನುವಾರರಂದು ಪುರಾಣ ಪ್ರವಚನ ಮತ್ತು ದೇವಸ್ಥಾನದಲ್ಲಿ ಗಾವು ಶಾಂತಿ ಮತ್ತು ಏ.14ರ ಸೋಮವಾರ ವಸಂತೋತ್ಸವ ಧ್ವಜಾರೋಹಣ ನೆರವೇರಲಿದೆ.

Leave a Reply

Your email address will not be published. Required fields are marked *