ಮಂಗಳೂರು : ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರನ್ನು ಆರೋಪಿಗಳನ್ನು ಬಂಧಿಸಿದ್ದಾರೆ.

ಸುಮಾರು 12 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದ, ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ನೆನ್ನೆ ಮಧುರೈ ಸಮೀಪದಲ್ಲಿ ಬಂಧಿಸಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಹಾಗೂ ಮಣಿವಣ್ಣನ್ ಎಂದು ಗುರುತಿಸಲಾಗಿದೆ.

ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಮೂವರು ಆರೋಪಿಗಳ ಬಂಧನವಾಗಿದ್ದು. ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಹಾಗೂ ಮಣಿವಣ್ಣನ್ ಬಂಧಿತ ಪ್ರಮುಖ ಆರೋಪಿಗಳಾಗಿದ್ದಾರೆ. ಇತರ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು.
ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, 2 ಗೋಣಿಚೀಲದಲ್ಲಿದ್ದ ನಗದು, ತಲ್ವಾರ್‌, 2 ಪಿಸ್ತೂಲ್‌ಗಳನ್ನು ಜಪ್ತಿ ಮಾಡಿದ್ದೇವೆ ಹಾಗೂ ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ ಅವರು ಮಾಹಿತಿ ನೀಡಿದ್ದಾರೆ.

ಇದೇ ತಿಂಗಳು ಜನವರಿ 17ರಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನಲ್ಲಿರುವ ಸಹಕಾರಿ ಬ್ಯಾಂಕ್‌ಗೆ ಹಾಡಹಗಲೇ ನುಗ್ಗಿದ ಖದೀಮರ ಗುಂಪು ಸುಮಾರು 12 ಕೋಟಿ ರೂ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದರು. ಮಹಾರಾಷ್ಟ್ರದ ಕಾರು ಬಳಸಿ ಕೋಟೆಕಾರು ಬ್ಯಾಂಕ್​​ನಲ್ಲಿ ಕೃತ್ಯವೆಸಗಿದ್ದರು. ಬ್ಯಾಂಕ್ ದರೋಡೆ ಬಳಿಕ ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿ ಆಗಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *