ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಕಠೋರ ನಿಯಮಕ್ಕೆ ತಾಲಿಬಾನ್ ಸರ್ಕಾರ ಮುಂದಾಗಿದೆ.
ದೇಶದಲ್ಲಿ ಎಲ್ಲಾ ರಾಷ್ಟ್ರೀಯ ಮತ್ತು ವಿದೇಶಿ ಸರ್ಕಾರೇತರ ಸಂಸ್ಥೆಗಳು ಹಾಗೂ ಎನ್‌ಜಿಒಗಳಿಂದ ಮಹಿಳಾ ಉದ್ಯೋಗಿಗಳನ್ನು ಕೈಬಿಡಲು ಆದೇಶಿಸಿದೆ. ಈ ಆದೇಶ ಉಲ್ಲಂಘಿಸಿ ಮಹಿಳೆಯರನ್ನು ನೇಮಿಸಿಕೊಂಡರೆ ಅಂತಹ ಸಂಸ್ಥೆಗಳನ್ನು ಮುಚ್ಚುವುದಾಗಿ ಹೇಳಿದೆ.
ಅಫ್ಘಾನಿಸ್ತಾನದ ಆರ್ಥಿಕ ಸಚಿವಾಲಯ ಈ ಬಗ್ಗೆ ಎಕ್ಸ್ ಆದೇಶ ಪ್ರತಿಯನ್ನು ಪ್ರಕಟಿಸಿದೆ. ಆದೇಶದ ಅನ್ವಯ ವಿದೇಶಿ ಸಂಸ್ಥೆಗಳಲ್ಲಿ ಮಹಿಳಾ ಉದ್ಯೋಗಿಗಳ ಕೆಲಸವನ್ನು ಕೂಡಲೇ ನಿಲ್ಲಿಸಲು ಸೂಚಿಸಲಾಗಿದೆ. ಈ ನಿಯಮ ಅನುಸರಿಸಲು ವಿಫಲವಾದರೆ ಎನ್‌ಜಿಒ ಹಾಗೂ ಸಂಸ್ಥೆಗಳ ಪರವಾನಗಿಯನ್ನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿದೆ.
ತಾಲಿಬಾನ್ ಸರ್ಕಾರ ಈಗಾಗಲೇ ಅನೇಕ ಉದ್ಯೋಗ ಮತ್ತು ಬಹುತೇಕ ಸಾರ್ವಜನಿಕ ಸ್ಥಳಗಳಿಂದ ಮಹಿಳೆಯರನ್ನು ನಿರ್ಬಂಧಿಸಲಾಗಿದೆ. ಆರನೇ ತರಗತಿಯ ನಂತರದ ಶಿಕ್ಷಣದಿಂದಲೂ ಹೆಣ್ಣುಮಕ್ಕಳನ್ನು ಹೊರಗಿಡಲಾಗಿದೆ. ಅಫ್ಘಾನ್ ಮಹಿಳೆಯರನ್ನು ಉದ್ಯೋಗದಿಂದ ಅಮಾನತುಗೊಳಿಸುವಂತೆ ತಾಲಿಬಾನ್ ಎನ್‌ಜಿಒಗಳಿಗೆ ಹೇಳಿದ ಎರಡು ವರ್ಷಗಳ ನಂತರ ಈ ಆದೇಶ ಬಂದಿದೆ. ಹಿಜಬ್ ಸರಿಯಾಗಿ ಧರಿಸದ ಕಾರಣ ಈ ನಿಯಮಗಳನ್ನು ಜಾರಿಗೆ ತರಲಾಗಿದೆ.