ಬೆಂಗಳೂರು : ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಉಪಸಭಾಪತಿ ಪ್ರಾಣೇಶ್ ಅವರಿಗೆ ಪತ್ರವನ್ನು ರವಾನಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಮಾರ್ಚ್ 31ರ ಒಳಗೆ ಸ್ವೀಕರಿಸಬೇಕು.

ಏಪ್ರಿಲ್ 1ರಿಂದ ಅನ್ವಯವಾಗುವಂತೆ ಕ್ರಮಕೈಗೊಂಡು ನನ್ನನ್ನು ಈ ಹುದ್ದೆಯಿಂದ ಮುಕ್ತಿಗೊಳಿಸಬೇಕು ಎಂದು ಉಪಸಭಾಪತಿಗೆ ಬರೆದ ಪತ್ರದಲ್ಲಿ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ. ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ್ದ, ಬಸವರಾಜ ಹೊರಟ್ಟಿ, ಇತ್ತೀಚೆಗೆ ಸದನದಲ್ಲಿ ನಡೆದ ಬೆಳವಣಿಗೆ ನನ್ನ ಮನಸ್ಸಿಗೆ ಬೇಸರ ತಂದಿದೆ.
ಈ ಸದನದಲ್ಲಿ ನಡೆದ ಬೆಳೆವಣಿಗೆಯನ್ನು ನಿಯಂತ್ರಿಸುವಲ್ಲಿ ನಾನು ವಿಫಲನಾಗಿದ್ದೇನೆ. ಸಭಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವುದು ಸೂಕ್ತವಲ್ಲ ಎಂದು ಹೇಳಿಕೊಂಡಿದ್ದಾರೆ.