ಬೆಳಗಾವಿ : ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಕಾಂಗ್ರೆಸ್ ಸಮಾವೇಶದ ವೇಳೆ ಹೃದಯಾಘಾತದಿಂದ ಮೃತಪಟ್ಟ ಹಾವೇರಿ/ನದಿಹರಳ್ಳಳ್ಳಿ ಗ್ರಾಮದ ಬಸಪ್ಪ ಪಾಮೇನಳ್ಳಿ ಅವರ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಘೋಷಿಸಿದರು.
ಬೆಳಗಾವಿಯಲ್ಲಿ ಜ.21 ರಂದು ನಡೆದ ಸಮಾವೇಶದಲ್ಲಿ ಸುಮಾರು 60 ವರ್ಷ ವಯಸ್ಸಿನ ಬಸಪ್ಪ ಅವರು ಕುಸಿದು ಬಿದ್ದು ಮೃತಪಟ್ಟಿದ್ದರು. ಬಸಪ್ಪ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಡಿ.ಕೆ.ಶಿವಕುಮಾರ್ ಅವರು, ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗೆ ಭಗವಂತ ನೀಡಲಿ ಎಂದು ತಿಳಿಸಿದ್ದಾರೆ.
ಸತ್ಯದ ಹಾದಿಯಲ್ಲಿ ನಡೆದ ಮಹಾತ್ಮನ ವಿರುದ್ಧವೇ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಗಾಂಧೀಜಿಯವರ ಚಿಂತನೆ ಉಳಿಯಬೇಕಾಗಿದೆ. ಗೋಡ್ಸೆ ಚಿಂತನೆಯನ್ನು ನಾವೆಲ್ಲಾ ಸೇರಿ ನಾಶ ಮಾಡಬೇಕಿದೆ. ಗಾಂಧೀಜಿಯವರ ತತ್ವಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸಬೇಕಿದೆ ಎಂದು ತಿಳಿಸಿದೆ. ಅಲ್ಲದೇ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ದೇಶದ ಮೂಲೆ ಮೂಲೆಯಲ್ಲೂ ನಡೆಸಬೇಕೆಂದು ಮನವಿ ಮಾಡಿದರು.