ತುಮಕೂರು : ತುಮಕೂರು ತಾಲ್ಲೂಕಿನ ಕೋರ ಹತ್ತಿರದ ಓಬಳಾಪುರ ಗೇಟ್ ಬಳಿ ಮಂಗಳವಾರ ಬೆಳಗಿನ ಜಾವ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿ ಗೊಂದಿಹಳ್ಳಿ ಗ್ರಾಮದ ಮಮ್ತಾಜ್ (38) ಶಾಖೀರ್ ಹುಸೇನ್ (48), ಮಹ್ಮದ್ ಆಸೀಫ್ (12) ಮೃತರು.
ತುಮಕೂರಿನಿಂದ ಮಧುಗಿರಿ ಕಡೆಗೆ ಹೋಗುವಾಗ ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಡಿವೈಎಸ್ ಪಿ ಕೆ.ಆರ್. ಚಂದ್ರಶೇಖರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ದಟ್ಟ ಮಂಜಿನ ಕಾರಣ ದಾರಿ ಕಾಣದೇ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.