ಮಹಾರಾಷ್ಟ್ರ : ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 10 ಉದ್ಯೋಗಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿನ ಸ್ಫೋಟ ಸಂಭವಿಸಿದ ಪರಿಣಾಮ ಘಟಕದ ಮೇಲ್ಛಾವಣಿ ಕುಸಿದು 13 ರಿಂದ 14 ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ರಕ್ಷಣಾ ಪ್ರಯತ್ನಗಳು ನಡೆಯುತ್ತಿವೆ. ಸ್ಫೋಟದಲ್ಲಿ ಒಬ್ಬ ವ್ಯಕ್ತಿಯ ಸಾವನ್ನಪ್ಪಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾಹಿತಿ ನೀಡಿದ್ದಾರೆ.

ಈ ಘಟನಾ ಸ್ಥಳದಿಂದ ಐದು ಜನರನ್ನು ರಕ್ಷಿಸಲಾಗಿದೆ ಮತ್ತು ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳದಲ್ಲಿದ್ದಾರೆ, ನಾಗ್ಪುರದಿಂದ ರಾಜ್ಯ ವಿಪತ್ತು ತಂಡ ಸ್ಥಳಕ್ಕಾಗಮಿಸುತ್ತಿದೆ ಎಂದಿದ್ದಾರೆ.

ಕಾರ್ಖಾನೆ ಆವರಣದಲ್ಲಿ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೋಲ್ಟೆ ತಿಳಿಸಿದ್ದಾರೆ. ಮೇಲ್ಛಾವಣಿ ಕುಸಿದಿದ್ದು, ಅವಶೇಷಗಳನ್ನು ತೆಗೆಯಲು ಅಗೆಯುವ ಯಂತ್ರವನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

ಜವಾಹರ್ ನಗರ ಪ್ರದೇಶದಲ್ಲಿರುವ ಕಾರ್ಖಾನೆಯ ಎಲ್‌ಟಿಪಿ ವಿಭಾಗದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಫೋಟದ ಸಮಯದಲ್ಲಿ ವಿಭಾಗದಲ್ಲಿ 14 ನೌಕರರು ಕೆಲಸ ಮಾಡುತ್ತಿದ್ದರು, ಅವರಲ್ಲಿ ಮೂವರನ್ನು ಜೀವಂತವಾಗಿ ರಕ್ಷಿಸಲಾಗಿದೆ ಮತ್ತು ಒಬ್ಬರು ಸಾವನ್ನಪ್ಪಿದ್ದಾರೆ ಎಂದರು.

Leave a Reply

Your email address will not be published. Required fields are marked *