ಇಸ್ಲಾಮಾಬಾದ್ : ಬಲೂಚಿಸ್ತಾನದಲ್ಲಿ ರೈಲು ಹೈಜಾಕ್ ಪ್ರಕರಣದ ಬೆನ್ನಲ್ಲೇ ಪಾಕಿಸ್ತಾನ ವಜರಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟಗೊಂಡಿದೆ. ಪರಿಣಾಮ ಜಮಿಯತ್ ಉಲೇಮಾ-ಎ-ಇಸ್ಲಾಂ (ಜೆಯುಐ) ಜಿಲ್ಲಾ ಮುಖ್ಯಸ್ಥ ಅಬ್ದುಲ್ಲಾ ನದೀಮ್ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಅಜಮ್ ವಾರ್ಸಾಕ್ ಬೈಪಾಸ್ ರಸ್ತೆಯಲ್ಲಿರುವ ಮೌಲಾನಾ ಅಬ್ದುಲ್ ಅಜೀಜ್ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ನೆನ್ನೆ ಪ್ರಾರ್ಥನೆಯ ಸಮಯದಲ್ಲಿ ಮಸೀದಿಯ ಪ್ರವಚನ ಪೀಠದಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.
ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳು ಗಾಯಾಳುಗಳನ್ನು ವಾನಾದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ತನಿಖೆಯ ಅಂಗವಾಗಿ ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.