ರಾಮನಗರ : ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ಈ ಅಪಘಾತದಲ್ಲಿ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಗರ ಮತ್ತು ಕನಕಪುರ ನಡುವಿನ ಅಚ್ಚಲು ಕ್ರಾಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಸವಾರ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕನಕಪುರದಿಂದ ರಾಮನಗರಕ್ಕೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ, ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.