ಭಾರತ ನೀಡಿದ್ದ ಗಡುವು ಮುಗಿದ ಹಿನ್ನೆಲೆಯಲ್ಲಿ ಕೆನಡಾ ತನ್ನ 41 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿದೆ.
ಖಾಲಿಸ್ತಾನ ಉಗ್ರನ ಹತ್ಯೆ ವಿವಾದ ಹಿನ್ನೆಲೆಯಲ್ಲಿ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿದ್ದು, ಉಗ್ರನ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ ಕೆನಡಾ ಆರೋಪದ ಹಿನ್ನೆಲೆಯಲ್ಲಿ ಭಾರತ ಕೆನಡಾ ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಸೂಚಿಸಿತ್ತು.
ಕೆನಡಾ ವಿದೇಶಾಂಗ ಸಚಿವ ಮಲೇನಿ ಜಾಲಿ ಗುರುವಾರ ಈ ವಿಷಯ ತಿಳಿಸಿದ್ದು, ವಿಯೆನ್ನಾ ಒಪ್ಪಂದವನ್ನು ಉಲ್ಲಂಘಿಸಿರುವ ಭಾರತ ರಾಜತಾಂತ್ರಿಕ ಅಧಿಕಾರಿಗಳನ್ನು ಉಚ್ಚಾಟಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.