ಹುಬ್ಬಳ್ಳಿ: ಟೋಲ್ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿದ ಘಟನೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಟೋಲ್‌ ನಲ್ಲಿ ನಡೆದಿದೆ.

ಮೂರು ತಿಂಗಳ ಮಗು ಸಾನ್ವಿ ಮೃತಪಟ್ಟ ಮಗು. ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಟೋಲ್ ಬಳಿ
ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡ ಟೋಲ್ ನ ಡಿವೈಡರ್ ಗೆ ಡಿಕ್ಕಿಯಾಗಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.‌ ಆದ್ರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೂರು ತಿಂಗಳ ಮಗು ಸಾನ್ವಿ ಸಾವನ್ನಪ್ಪಿದೆ.

ಈ ಕಾರು ಹುಬ್ಬಳ್ಳಿಯಿಂದ ಮುಂಡರಗಿ ಗೆ ಹೊರಟಿತ್ತು. ಕಾರಿನಲ್ಲಿದ್ದ ವಿರೇಶ ಸಜ್ಜನ ಶೆಟ್ಟರ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತಂತೆ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *