Category: ರಾಜ್ಯ

ಇಂದು ಕೊಪ್ಪಳ ಬಂದ್‌ ಕರೆ; ಖಾಸಗಿ ಶಾಲೆಗಳಿಗೆ ರಜೆ

ಕೊಪ್ಪಳ : ಬಿ.ಆರ್‌. ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ ಹೇಳಿಕೆ ಖಂಡಿಸಿ ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಖಾಸಗಿ ಶಾಲೆಗಳಿಗೆ…

ಸಿಲಿಂಡರ್ ಸ್ಫೋಟ; ಮನೆ ಗೋಡೆಗಳು ಛಿದ್ರ – ಇಬ್ಬರಿಗೆ ಗಾಯ

ಆನೇಕಲ್ : ಇಂದು ಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಕಿತ್ತಾಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಸುನೀಲ್ ಜೋಸೆಫ್, ವಿಷ್ಣು ಜಯರಾಜ್ ಎಂಬವರು ಗಾಯಗೊಂಡಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ…

ಸಾಹಿತಿ ನಾ. ಡಿಸೋಜ ಇನ್ನಿಲ್ಲ: ಸಿಎಂ ಸೇರಿ ಗಣ್ಯರಿಂದ ಸಂತಾಪ

ಬೆಂಗಳೂರು : ನಾಡಿನ ಹಿರಿಯ ಸಾಹಿತಿ ನಾ. ಡಿಸೋಜ ಅವರು ವಿಧಿವಶರಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ಹಿರಿಯ ನಾಯಕ ಬಿ,ಎಸ್.ಯಡಿಯೂರಪ್ಪ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ…

ನಗರದಲ್ಲಿ ಚಿರತೆ ಪ್ರತ್ಯಕ್ಷ; ಜನರಲ್ಲಿ ಆತಂಕ!

ವಿಜಯಪುರ : ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಓಡಾಟ ನಡೆಸಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ನಗರದ ಮುನೇಶ್ವರಬಾಗ್ ಪ್ರದೇಶದಲ್ಲಿ ಚಿರತೆ ಓಡಾಡಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…

ಹೆಚ್‌ಡಿಕೆಯೇ ಕಾರು ಬೇಡ ಎಂದಿದ್ರು – ಚಲುವರಾಯಸ್ವಾಮಿ ಬಾಂಬ್‌

ಮಂಡ್ಯ : ರಾಜಕೀಯ ಹಾಗೂ ವೈಯಕ್ತಿಕ ಜೀವನದಲ್ಲಿ ಕುಚುಕುಗಳ ರೀತಿ ಇದ್ದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಚಲುವರಾಯಸ್ವಾಮಿ ಇದೀಗ ಬದ್ಧ ವೈರಿಗಳಾಗಿ ಬದಲಾಗಿದ್ದಾರೆ. ಇಬ್ಬರ ನಡುವೆ ಈಗ ಒಂದಲ್ಲ ಒಂದು ವಿಚಾರಕ್ಕೆ ಮಾತಿನ ಯುದ್ಧ ನಡೆಯುತ್ತಿದೆ. ಇದೀಗ ಕಾರಿನ ವಿಚಾರಕ್ಕೆ ಇಬ್ಬರ ನಡುವೆ…

ಕೋರ್ಟ್ ಅನುಮತಿ ಬಳಿಕ ಆರ್‌ಎಸ್‌ಎಸ್ ಬೃಹತ್ ಪಥ ಸಂಚಲನ!

ಕೋಲಾರ : ಕೋರ್ಟ್ ಅನುಮತಿ ಬಳಿಕ ಕೋಲಾರದಲ್ಲಿ ಕೊನೆಗೂ ಆರ್‌ಎಸ್‌ಎಸ್ ಪಥ ಸಂಚನಲ ನಡೆಸಿದೆ. ಆರ್‌ಎಸ್‌ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ವಕ್ಕಲೇರಿಯಿಂದ ಕೋಲಾರ ನಗರದವರೆಗೆ 16 ಕಿಮೀ ಪಥ ಸಂಚಲನ ನಡೆಯಿತು. ಕೋಲಾರದ ಕ್ಲಾಕ್ ಟವರ್, ಟ್ರಯಾಂಗಲ್ ಸರ್ಕಲ್, ಪಲ್ಲವಿ ಸರ್ಕಲ್‌ನಲ್ಲಿ ಸರ…

ಡಿಕೆಶಿ, ಲಕ್ಷ್ಮೀ ಸೇರಿದಂತೆ ಹಲವರ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸಿಟಿ ರವಿ ದೂರು!

ಬೆಂಗಳೂರು : ವಿಧಾನಪರಿಷತ್‌ನಲ್ಲಿ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್​ ಸದಸ್ಯ ಸಿ.ಟಿ ರವಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು, ಪ್ರತಿದೂರುಗಳು ದಾಖಲಾಗುತ್ತಲೇ ಇವೆ. ಸಿಟಿ ರವಿ ಡಿ.19ರಂದು ಬೆಳಗಾವಿಯಲ್ಲಿ ತಮ್ಮ…

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ನಾ.ಡಿಸೋಜ ನಿಧನ!

ಮಂಗಳೂರು : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ನೋರ್ಬೆರ್ಟ್ ಡಿಸೋಜ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. 88 ವರ್ಷದ ಡಿಸೋಜ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ…

ಕಾಂಗ್ರೆಸ್ ಅವಧಿಯಲ್ಲಿ ಶೇ. 60 ರಷ್ಟು ಕಮಿಷನ್ ಚರ್ಚೆ: ಹೆಚ್‌ಡಿಕೆ ಬಾಂಬ್!

ಮೈಸೂರು : ರಾಜ್ಯ ರಾಜಕಾರಣದಲ್ಲಿ ಮತ್ತೆ ಪರ್ಸೆಂಟೇಜ್ ವಿಚಾರ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಅವಧಿಯಲ್ಲಿ ಈಗ ಶೇ. 60 ರಷ್ಟು ಕಮಿಷನ್ ತೆಗೆದುಕೊಳ್ಳಲಾಗ್ತಿದೆ ಎಂದು ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌ಡಿಕೆ, ವಿಧಾನಸೌಧದಲ್ಲಿ ಸಚಿವರೇ ಲಂಚ ಪಡೆಯುತ್ತಿದ್ದಾರೆ.…