Category: ರಾಜಕೀಯ

ಮುನಿರತ್ನ ಅಭಿನಯದ ‘ಆ್ಯಸಿಡ್ ಮೊಟ್ಟೆ’ ಸಿನಿಮಾ 100 ದಿನ ಓಡಿಸಿ; ಡಿಕೆ.ಸುರೇಶ್

ಬೆಂಗಳೂರು : ʼಆ್ಯಸಿಡ್ ಮೊಟ್ಟೆʼ ದಾಳಿ ಪ್ರಕರಣ ಪೂರ್ವ ನಿಯೋಜಿತವಾಗಿದ್ದು, ಶಾಸಕ ಮುನಿರತ್ನ ಅಭಿನಯದ ‘ಆ್ಯಸಿಡ್‌ ಮೊಟ್ಟೆ’ ಸಿನಿಮಾ 100 ದಿನ ಓಡಿಸಿ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಕಿಡಿಕಾರಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಉದ್ದೇಶಿಸಿ ಮಾತನಾಡಿದ ಅವರು, ಈ ವಿಡಿಯೋ…

ಶಾಸಕ ಮುನಿರತ್ನ ಮನೆಗೆ ಸಿಟಿ ರವಿ ಭೇಟಿ!

ಬೆಂಗಳೂರು : ಮೊಟ್ಟೆ ದಾಳಿ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸಕ್ಕೆ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಭೇಟಿ ಬಳಿಕ ಮಾತನಾಡಿದ ಸಿ.ಟಿ ರವಿ,…

ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣ; ಸಿಎಂ

ಬೆಳಗಾವಿ : ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವ ಅಂಗವಾಗಿ ನಗರದ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ನೂತನ ಪ್ರತಿಮೆಯನ್ನು ಸಿಎಂ ಸಿದ್ಧರಾಮಯ್ಯ‌ ಅವರು ಇಂದು ಅನಾವರಣಗೊಳಿಸಿದರು. ಇದರೊಂದಿಗೆ ‘ಗಾಂಧಿ ಭಾರತ’ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಇದೇ ವೇಳೆ ವೀರಸೌಧದ…

ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಶತಮಾನದ ಸಂಭ್ರಮ

ಬೆಳಗಾವಿ : ಶತಮಾನ ಹಿಂದೆ ಮಹಾತ್ಮ ಗಾಂಧಿ ಅವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಕಾಂಗ್ರೆಸ್ ಅಧಿವೇಶನವನ್ನು ಸ್ಮರಣಿಯಗೊಳಿಸಲು ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿ ಸಜ್ಜಾಗಿದೆ. 1924ರ ಡಿಸೆಂಬರ್ 26 ಹಾಗೂ 27ರಂದು ಮಹಾತ್ಮ ಗಾಂಧೀಜಿ ಬೆಳಗಾವಿ ಭೇಟಿ ನೀಡಿ, ಕಾಂಗ್ರೆಸ್ ಅಧಿವೇಶದಲ್ಲಿ…

ಶಾಸಕ ಮುನಿರತ್ನ ಆರೋಪಕ್ಕೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು

ಬೆಳಗಾವಿ : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತದ ಹಿಂದೆ ಡಿಕೆ ಶಿವಕುಮಾರ್, ಡಿ.ಕೆ.ಸುರೇಶ್, ಕುಸುಮಾ ಕೈವಾಡ ಇದೆ ಎಂಬ ಆರೋಪಕ್ಕೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಮುನಿರತ್ನ ತಾವೇ ಹಲ್ಲೆ ಮಾಡಿಸಿಕೊಂಡಿರಬಹುದು, ಬಿಜೆಪಿ ಡ್ರಾಮಾ ಕಂಪನಿ ರೀತಿ…

ಅಮಿತ್ ಶಾ ಭಾಷಣ ತಿರುಚಿ ಕಾಂಗ್ರೆಸ್ ಅಪಪ್ರಚಾರ – ಹೆಚ್‌.ಡಿ ದೇವೇಗೌಡ

ಬೆಂಗಳೂರು : ಸಂಸತ್ ಅಧಿವೇಶನದಲ್ಲಿ ನಾನು ಅಮಿತ್ ಶಾ ಅವರ ಭಾಷಣ ಕೇಳಿದ್ದೇನೆ. ಕೇಂದ್ರ ಗೃಹ ಸಚಿವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆಂದು ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ನಾಡಪ್ರಭು ಕೆಂಪೇಗೌಡ ಜನಪರ ವೇದಿಕೆ ವತಿಯಿಂದ ಅಟಲ್…

ತಲೆಗೆ ಮೊಟ್ಟೆ ಪೆಟ್ಟು; ಆಸ್ಪತ್ರೆಯಿಂದ ಮುನಿರತ್ನ ಡಿಸ್ಚಾರ್ಜ್‌

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಅವರು ಮಲ್ಲೇಶ್ವರಂ ನ ಕೆಸಿ ಜನರಲ್‌ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್‌ ಆಗಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ ಈಗ ನಾನು ಏನು ಹೇಳುವುದಿಲ್ಲ. ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಹೇಳುತ್ತೇನೆ…

ನನ್ನ ಮೇಲೆ ಆರೋಪ: ಮುನಿರತ್ನಗೆ ಡಿಕೆ ಸುರೇಶ್‌ ತಿರುಗೇಟು

ಬೆಳಗಾವಿ : ಶಾಸಕ ಮುನಿರತ್ನ ಅವರೇ ಗೂಂಡಾಗಳಿಂದ ಗಲಾಟೆ ಮಾಡಿಸಿ ನನ್ನ ಮೇಲೆ ಆರೋಪ ಬರುವಂತೆ ಮಾಡಲು ಮುಂದಾಗಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್‌ ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಡಿಕೆ ಸುರೇಶ, ಈ ವೇಳೆ ಕುಸುಮಾ ಅವರನ್ನು ಶಾಸಕಿಯನ್ನಾಗಿ…

ಸಿಎಂಗೆ ನೈತಿಕ ಹೊಣೆಗಾರಿಕೆ ಇಲ್ಲವೇ – ಬಿವೈ ವಿಜಯೇಂದ್ರ

ಬೆಂಗಳೂರು : ಮೈಸೂರಿನ ಪ್ರಮುಖ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ಮಹಾನಗರ ಪಾಲಿಕೆಯ ಪ್ರಸ್ತಾವನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ವಿಚಾರದಲ್ಲಿ ಸಿಎಂಗೆ ನೈತಿಕ ಹೊಣೆಗಾರಿಕೆಯಿಲ್ಲವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ. ಮೈಸೂರು ಸಾಮ್ರಾಜ್ಯವನ್ನು ರಾಜರು ಮತ್ತು…

ಸಿಟಿ ರವಿ ಅವರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ – ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣ ಸಂಬಂಧ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…